ಕೊಪ್ಪಳ : ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:-ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಮಹೇಶ್ ಭಟ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಭೂ ವಿಜ್ಞಾನಿ ಸನ್ನಿತ್ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದು, ರಾಜಧಾನ ಪಾವತಿಸದೇ ಮರಳು ಸಾಗಾಣಿಕೆ ನಡೆಯುತ್ತಿರುವುದನ್ನು ಖಚಿತ ಪಡಿಸಿಕೊಂಡು ಟಿಪ್ಪರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಯಮದ ಪ್ರಕಾರ ಪೊಲೀಸರು ದಂಡ ವಿಧಿಸಿದ್ದಾರೆ. ಟಿಪ್ಪರ್ ಗೆ ನಂಬರ್ ಪ್ಲೇಟ್ ಅಳವಡಿಸಿಲ್ಲ. ಕಾನೂನು ನಿಯಮ ಗಾಳಿಗೆ ತೂರಿದ್ದಾರೆ.
ಇದನ್ನೂ ಓದಿ:-ಕಲಬುರಗಿ ಪಶುಪಾಲನಾ ಇಲಾಖೆಯ ಜಿಲ್ಲಾ ಕಚೇರಿಗೆ ಸಿ.ಇ.ಓ. ದಿಢೀರ್ ಭೇಟಿ, ಪರಿಶೀಲನೆ
ಕೊಪ್ಪಳದ ಕನಕಗಿರಿ ತಾಲೂಕಿನ ಗುಡದೂರು, ಯತ್ನಟ್ಟಿ, ಬುನ್ನಟ್ಟಿ ಹಾಗೂ ನವಲಿ ಭಾಗದಲ್ಲಿ ವಿಪರೀತವಾಗಿ ಅಕ್ರಮ ಮರಳು ದಂದೆ ನಡೆಯುತ್ತಿದೆ ಎಂದು ಇತ್ತೀಚೆಗೆ ಕನ್ನಡ ಸೇನೆ ಸಂಘಟನೆ ಪದಾಧಿಕಾರಿಗಳು ದೂರು ಸಲ್ಲಿಸಿದ್ದರು.