ಚಿತ್ರದುರ್ಗ| ಜೆಸಿಬಿ ಬಳಸಿ ಅಕ್ರಮ ಗೂಡಂಗಡಿಗಳ ತೆರವು; ವ್ಯಾಪಾರಿಗಳು ಆಕ್ರೋಶ

ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಬಳಿ ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳ ತೆರವನ್ನು ಬೆಂಗಳೂರಿನಲ್ಲಿ ಕೋಗಿಲು ಬಡಾವಣೆಯಲ್ಲಿ ನಿರ್ಮಿಸಿದ್ದ ಶೆಡ್​​ ತೆರವು ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಮಾಡಲಾಗಿದೆ.

ನಗರಸಭೆ‌ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಜೆಸಿಬಿ ಬಳಸಿ ಹಣ್ಣು, ತರಕಾರಿ, ಟೀಸ್ಟಾಲ್, ಗುಜರಿ ಅಂಗಡಿಗಳ ತೆರವು ಮಾಡಲಾಗಿದೆ.

ಇದನ್ನೂ ಓದಿ: ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ

ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಕೋರ್ಟ್ ಆದೇಶದಂತೆ ನಾವು ಗೂಡಂಗಡಿ ತೆರವು ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ನೋಡಿ: ಕುವೆಂಪು ಜನ್ಮ ದಿನ | “ಬನ್ನಿ ಬನ್ನಿ ಲೋಕಗುರುಗಳೆಲ್ಲ ಬನ್ನಿ” ಹಾಡು : ಎಚ್.ವಿ. ನಟರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *