ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ತಾಲ್ಲೂಕಿನ ಚೆಲುವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಣೆ ಮಾಡುತ್ತಿದ್ದ ಚಾಮರಾಜನಗರದ ನಿವಾಸಿಗಳಾದ ಜುಬೇರ್, ಇರ್ಫಾನ್ ಹಾಗೂ ವಾಸೀಂ ಉಲ್ಲಾ ಎಂಬವರನ್ನು ಜುಲೈ 30ರಂದು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 248 ಕೆ.ಜಿ. ಪಡಿತರ ಅಕ್ಕಿ ಹಾಗೂ ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮೀಣ ಪ್ರದೇಶದಿಂದ ಪಡಿತರ ಅಕ್ಕಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಕಡೆಗೆ ಕೊಂಡೊಯ್ಯುತ್ತಿದ್ದರು.
ಇದನ್ನೂ ಓದಿ: ಶಿವಮೊಗ್ಗ| ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
ಪಿಎಸ್‌ಐ ಸುಪ್ರೀತ್ ಹಾಗೂ ಆಹಾರ ಇಲಾಖೆಯ ಶಿರಸ್ತೆದಾರ್ ವಿಶ್ವನಾಥ್, ಪ್ರಸಾದ್ ಜಂಟಿ ಕಾರ್ಯ ನಡೆಸಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಬಿಹಾರ ಚುನಾವಣೆ: ಹಿಂದುಳಿದ, ಅತಿ ಹಿಂದುಳಿದ ವರ್ಗಗಳ(ಇಬಿಸಿ) ಒಲವು, ನಿಲುವು ಎತ್ತ ಕಡೆ? Janashakthi Media
