ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆಯ ಪ್ರಕಾರ, ಈ ವರ್ಷದ ಏಪ್ರಿಲ್‌ನಿಂದ ಜೂನ್‌ವರೆಗೆ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಇದನ್ನು ಓದಿ :-ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಇಬ್ಬರ ಬಂಧನ
ಉತ್ತರ ಮತ್ತು ಪೂರ್ವ ಭಾರತ, ಮಧ್ಯಭಾರತದ ಬಹುತೇಕ ಪ್ರದೇಶಗಳು ಹಾಗೂ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಿಸಿಗಾಳಿ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಈ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಎರಡು ಪಟ್ಟು ಹೆಚ್ಚು ಬಿಸಿಗಾಳಿ ಉಂಟಾಗಬಹುದು.
ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡಿನ ಉತ್ತರ ಭಾಗಗಳಲ್ಲಿ ತಾಪಮಾನ ಹೆಚ್ಚಾಗುವ ನಿರೀಕ್ಷೆ ಇದೆ.
ಇದನ್ನು ಓದಿ :-ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ಸಂಚಿನ ಮಾಹಿತಿಯ ಆಡಿಯೋ ಬಿಡುಗಡೆ
ಈ ಮುನ್ನೆಚ್ಚರಿಕೆಯನ್ನು ಗಮನದಲ್ಲಿಟ್ಟು, ಸಾರ್ವಜನಿಕರು ಬೇಸಿಗೆಯಲ್ಲಿ ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅಗತ್ಯ.