ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಮುಂದಿನ ನಾಲ್ಕರಿಂದ ಐದು ದಿನಗಳವರೆಗೆ ಉತ್ತರ ಭಾರತದ ಗುಜರಾತ್, ರಾಜಸ್ಥಾನ, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ತಾಪಮಾನವು 40 ರಿಂದ 43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ನಿರೀಕ್ಷೆಯಿದೆ.
ಇದನ್ನು ಓದಿ:ರಾಜ್ಯದ ಖಾಸಗಿ ಶಾಲೆ – ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಡೊನೇಷನ್ ಹಾವಳಿ ಕಡಿವಾಣಕ್ಕೆ ಎಸ್ಎಫ್ಐ ಒತ್ತಾಯ
ವಾಯುವ್ಯ ಭಾರತ, ಮಹಾರಾಷ್ಟ್ರ ಮತ್ತು ಭಾರತದ ದಕ್ಷಿಣ ಪರ್ಯಾಯ ದ್ವೀಪಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಗುಜರಾತ್, ಉತ್ತರ ಪಂಜಾಬ್, ಉತ್ತರ ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರಾಖಂಡ, ಉತ್ತರ ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ಅಸ್ಸಾಂನ ವಿವಿಧ ಭಾಗಗಳಲ್ಲಿ ಈಗಾಗಲೇ ತಾಪಮಾನವು 40-43 ಡಿಗ್ರಿ ಸೆಲ್ಸಿಯಸ್ರಷ್ಟು ಏರಿಕೆಯಾಗಿದೆ.
ಇದನ್ನು ಓದಿ:ಮೋದಿ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವ ವಿರೋಧಿ ಮತ್ತು ಒಕ್ಕೂಟ ವಿರೋಧಿ ಧಾವಂತ
ಏಪ್ರಿಲ್ 4 ರಂದು ಸೌರಾಷ್ಟ್ರ ಮತ್ತು ಕಚ್ನ ಕಾಂಡ್ಲಾದಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಏಪ್ರಿಲ್ 6 ರಿಂದ 10 ರವರೆಗೆ ಹರಿಯಾಣ, ಚಂಡೀಗಢ, ಪಂಜಾಬ್, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬಿಸಿಗಾಳಿ ತೀವ್ರಗೊಳ್ಳಲಿದ್ದು, ತಾಪಮಾನವು ಹೆಚ್ಚಾಗುವ ಸಾಧ್ಯತೆ ಇದೆ. ಇದಲ್ಲದೆ, ಏಪ್ರಿಲ್ 6 ರಿಂದ 9 ರವರೆಗೆ ಕರಾವಳಿ ಗುಜರಾತ್, ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.