ಮಹಿಳಾ ಮೀಸಲು ಮಸೂದೆ ತಕ್ಷಣ ಜಾರಿಗೊಳಿಸಿ: ರಾಹುಲ್‌ ಗಾಂಧಿ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಸ್ಥಾನಗಳನ್ನು ಒದಗಿಸುವ ಮಹಿಳಾ ಮೀಸಲು ಮಸೂದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ದೊರಕಿವೆ.ತಕ್ಷಣ

ಇದನ್ನೂ ಓದಿ:ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ಇದನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಸೆ-22 ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲು ಮಸೂದೆ ಅನುಷ್ಠಾನಗೊಳಿಸಲು ಬಿಜೆಪಿಗೆ ಇರುವ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ಜನಗಣತಿಯ ಆಧಾರದಲ್ಲಿ, ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ಬಳಿಕವಷ್ಟೇ ಈ ಮೀಸಲು ಸೌಲಭ್ಯ ಅನುಷ್ಠಾನಕ್ಕೆ ಬರಲಿದೆ. ಇದನ್ನೇ ಉಲ್ಲೇಖ ಮಾಡಿರುವ ಸರ್ಕಾರ ದುರ್ಬಲ ಕಾರಣ ನೀಡಿ ಮಹಿಳಾ ಮೀಸಲು ಮಸೂದೆ ಮುಂದೂಡಲು ಬಯಸುತ್ತಿದೆ ಎಂದು ಆರೋಪಿಸಿದ್ದಾರೆ.

10 ವರ್ಷಗಳ ಹಿಂದೆಯೇ ಮಹಿಳೆಯರಿಗೆ ಮೀಸಲಾತಿ ನೀಡುವ ಈ ವಿಧೇಯಕ ಜಾರಿಗೆ ಬರಬೇಕಿತ್ತು:

ಮಹಿಳಾ ಮೀಸಲಾತಿ ವಿಧೇಯಕ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲೇ ಕಾಯ್ದೆಯ ರೂಪದಲ್ಲಿ ಜಾರಿ ಆಗಬೇಕಿತ್ತು. ಆದರೆ, ಇದು ಸಾಧ್ಯವಾಗಲಿಲ್ಲ. ಈ ವಿಚಾರದಲ್ಲಿ ಶೇ. 100ರಷ್ಟು ವಿಷಾದ ಇದೆ. 10 ವರ್ಷಗಳ ಹಿಂದೆಯೇ ಮಹಿಳೆಯರಿಗೆ ಮೀಸಲಾತಿ ನೀಡುವ ಈ ವಿಧೇಯಕ ಜಾರಿಗೆ ಬರಬೇಕಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಒಬಿಸಿ ಸಮುದಾಯಕ್ಕೆ ನೀಡಲಾಗಿರುವ ಮೀಸಲಾತಿ ಕೋಟಾ ಅಡಿಯಲ್ಲಿ ಮಹಿಳೆಯರಿಗೂ ಮೀಸಲಾತಿ ಕೋಟಾ ನೀಡಬೇಕೆಂದು ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಪಕ್ಷಗಳು ಆಗ್ರಹಿಸಿದ್ದವು. ಆದರೆ, ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ಸಾರಥ್ಯದ ಯುಪಿಎ ಸರ್ಕಾರವು ಈ ಬೇಡಿಕೆಯನ್ನು ತಿರಸ್ಕರಿಸಿತ್ತು. ನಂತರದ ದಿನಗಳಲ್ಲಿ ಯುಪಿಎ ವಿರುದ್ಧ ಸಿಡಿದೆದ್ದ ಎಸ್‌ಪಿ ಹಾಗೂ ಆರ್‌ಜೆಡಿ ಪಕ್ಷಗಳು ಮಸೂದೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದವು. ಹೀಗಾಗಿ, ರಾಜ್ಯಸಭೆಯಲ್ಲಿ ಪಾಸ್ ಆಗಿದ್ದ ಮಸೂದೆ ಲೋಕಸಭೆಯಲ್ಲಿ ಬಾಕಿ ಉಳಿದಿತ್ತು. ಆ ನಂತರ ಯಾವುದೇ ಸರ್ಕಾರವೂ ಮಸೂದೆಗೆ ಅಂಗೀಕಾರ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಿರಲಿಲ್ಲ.

ವಿಡಿಯೋ ನೋಡಿ:ಒಂದು ದೇಶ ಒಂದು ಚುನಾವಣೆ : ದೇಶದ ಭದ್ರತೆಯನ್ನು ನಾಶ ಮಾಡುವ ಪ್ರಸ್ತಾಪ – ಎ ನಾರಾಯಣ Janashakthi Media

Donate Janashakthi Media

Leave a Reply

Your email address will not be published. Required fields are marked *