ತಿರುವನಂತಪುರ | ಪ್ರಜಾಪ್ರಭುತ್ವಕ್ಕೆ ಎಸ್‌ಐಆರ್ ಜಾರಿ ಅಪಾಯ – ಕೇರಳ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರ: ಕೇಂದ್ರ ಚುನಾವಣಾ ಆಯೋಗ ಬಿಹಾರದ ಬಳಿಕ ಕೇರಳ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕೈಗೊಳ್ಳುವ ನಿರ್ಧಾರಕ್ಕೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಿರುವನಂತಪುರ

ಇದನ್ನೂ ಓದಿ : ಹಿಂಗಾರು ಮಳೆ: ಅಕ್ಟೋಬರ್‌ 28 ಹಾಗೂ 29ರಂದು ರಾಜ್ಯದಲ್ಲಿ ಭಾರಿ ಮಳೆ

‘ಚುನಾವಣಾ ಆಯೋಗದ ಎಸ್‌ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟು ಮಾಡಲಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಿರುವನಂತಪುರ

‘ಈ ಕ್ರಮವು ಚುನಾವಣಾ ಆಯೋಗದ ಉದ್ದೇಶದ ಕುರಿತು ಅನುಮಾನಕ್ಕೆ ಕಾರಣವಾಗಿದೆ. ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ನಂಬಿಕೆಗೆ ಧಕ್ಕೆ ಉಂಟಾಗಲಿದೆ’ ಎಂದು ಅವರು ಹೇಳಿದ್ದಾರೆ.

‘2002ರಿಂದ 2004ರವರೆಗೆ ಮತದಾರರ ಪಟ್ಟಿಗಳ ಆಧಾರವಾಗಿಟ್ಟುಕೊಂಡು ಪರಿಷ್ಕರಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಇದು 1950ರ ಜನಪ್ರತಿನಿಧಿಗಳ ಕಾಯ್ದೆ ಹಾಗೂ 1960ರ ಮತದಾರರ ನೋಂದಣಿ ನಿಯಮಗಳ ಉಲ್ಲಂಘನೆಯಾಗಲಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಕೇರಳದಲ್ಲಿ ಸ್ಥಳೀಯಾಡಳಿತ ಚುನಾವಣೆ ಸಮೀಪಿಸುತ್ತಿರುವಂತೆಯೇ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾಯೋಗಿಕವಲ್ಲ ಎಂದು ಈಗಾಗಲೇ ಆಯೋಗಕ್ಕೆ ರಾಜ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ’ ಎಂದು ವಿಜಯನ್ ತಿಳಿಸಿದ್ದಾರೆ.

ಇದನ್ನೂ ನೋಡಿ : ನಿರಂಜನ | ಶತಮಾನದ ಮರುಓದು” – ಅಕ್ಟೋಬರ್ 31 ಸಮಾರೋಪ ಕಾರ್ಯಕ್ರಮ Janashakthi Media

Donate Janashakthi Media

Leave a Reply

Your email address will not be published. Required fields are marked *