ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಆಗಸ್ಟ್‌ 30ಕ್ಕೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಬುಧವಾರ ಆಗಸ್ಟ್- 30 ರಂದು ಅನುಷ್ಠಾ‌ನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ 1.30 ಕೋಟಿ ಕುಟುಂಬದ ಯಜಮಾನಿಯರು ಇದರ ಫಲಾನುಭವಿಗಳು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ನಾಳಿದ್ದು ಅನುಷ್ಠಾನಗೊಳ್ಳಲಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ಆಸರೆಯಾಗಿ ನಿಲ್ಲುತ್ತೇವೆ:ಸಿಎಂ ಸಿದ್ದರಾಮಯ್ಯ

ನಾಲ್ಕು ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

Donate Janashakthi Media

Leave a Reply

Your email address will not be published. Required fields are marked *