ಡೆಹ್ರಾಡೂನ್: ಇಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆಗೆ ಉತ್ತರಾಖಂಡ ಸರ್ಕಾರ ನಿರ್ಧರಿಸಲಿದೆ.ಉತ್ತರಾಖಂಡ
ಜಾತಿ, ಧರ್ಮ, ಲಿಂಗ ಇತ್ಯಾದಿಗಳ ಆಧಾರದ ಮೇಲೆ ಯುಸಿಸಿ ಅನುಷ್ಠಾನದಿಂದ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲ ಕಾನೂನುಗಳಲ್ಲಿ ಏಕರೂಪತೆಯನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಕಾಯ್ದೆಯ ನಿಯಮಗಳ ಅನುಮೋದನೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ತರಬೇತಿ ಸೇರಿದಂತೆ ಯುಸಿಸಿ ಜಾರಿಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಕ್ರೊ ಫೈನಾನ್ಸ್ ಕಿರುಕುಳ: ಊರು ಬಿಟ್ಟು ತೊರೆದ ಬೇಸತ್ತ ಮಹಿಳೆ
‘ರಾಜ್ಯದ ಆತ್ಮೀಯ ನಿವಾಸಿಗಳೇ, 2025ರ ಜನವರಿ 27ರಿಂದ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ. ಈ ಕಾನೂನು ಜಾರಿಗೆ ತರುತ್ತಿರುವ ಸ್ವತಂತ್ರ ಭಾರತದ ಮೊದಲ ರಾಜ್ಯ ಉತ್ತರಾಖಂಡವಾಗಿದೆ. ಯುಸಿಸಿಯನ್ನು ಕಾರ್ಯಗತಗೊಳಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ಕಾಯ್ದೆಯ ನಿಯಮಗಳ ಅನುಮೋದನೆ ಮತ್ತು ಸಂಬಂಧಿತ ಅಧಿಕಾರಿಗಳ ತರಬೇತಿಯನ್ನು ಪೂರ್ಣಗೊಳಿಸಲಾಗಿದೆ. ಈ ಕಾಯ್ದೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ ಮತ್ತು ಸಮಾನ ಹಕ್ಕುಗಳನ್ನು ಖಚಿತಪಡಿಸುತ್ತದೆ. ಏಕರೂಪ ನಾಗರಿಕ ಸಂಹಿತೆಯ ಅಡಿಯಲ್ಲಿ ದೇಶವನ್ನು ಅಭಿವೃದ್ಧಿ ಹೊಂದಿದ, ಸಂಘಟಿತ, ಸಾಮರಸ್ಯ ಮತ್ತು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡಲು ಪ್ರಧಾನ ಮಂತ್ರಿಗಳು ಮಾಡುತ್ತಿರುವ ಮಹಾ ಯಾಗದಲ್ಲಿ ಏಕರೂಪ ನಾಗರಿಕ ಸಂಹಿತೆ ಒಂದು ಕೊಡುಗೆಯಾಗಿದೆ. ಜಾತಿ, ಧರ್ಮ, ಲಿಂಗ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲ ಕಾನೂನುಗಳಲ್ಲಿ ಏಕರೂಪತೆಯನ್ನು ತರುತ್ತದೆ’ಎಂದು ಧಾಮಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಶನಿವಾರ ಎಎನ್‌ಐ ಜೊತೆ ಮಾತನಾಡಿದ್ದ ಸಿಎಂ ಧಾಮಿ, ಭಾರತೀಯ ಜನತಾ ಪಕ್ಷ 2022ರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.
ಸಂವಿಧಾನದ 44ನೇ ವಿಧಿಯನ್ನು ಉಲ್ಲೇಖಿಸಿದ್ದ ಅವರು, ಆ ವಿಧಿಯು ದೇಶದಾದ್ಯಂತ ನಾಗರಿಕರಿಗೆ ಏಕರೂಪದ ನಾಗರಿಕ ಸಂಹಿತೆಯನ್ನು ಪ್ರತಿಪಾದಿಸುತ್ತದೆ ಎಂದಿದ್ದರು.
ಇದನ್ನೂ ನೋಡಿ: ಕುರ್ಚಿಗಾಗಿನ ಜಗಳ ಬಿಡಿ – ಕೊರಗರ ಉದ್ದಾರಕ್ಕೆ ಗಮನ ಕೊಡಿ – ಬೃಂದಾ ಕಾರಟ್ Janashakthi Media