ಬೆಂಗಳೂರು: ಮೇ 9 ಶುಕ್ರುವಾರ ಮಹತ್ವದ ಸಚಿವ ಸಂಪುಟ ಸಭೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದ್ದೂ, ಸಭೆಯಲ್ಲಿ ಜಾತಿಜನಗಣತಿ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಕೇಂದ್ರದಿಂದ ಜನಗಣತಿ ಘೋಷಣೆ ನಡುವೆಯೇ ರಾಜ್ಯ ಹಿಂದುಳಿದ ವರ್ಗ ಆಯೋಗ ನಡೆಸಿರುವ ಸಮೀಕ್ಷೆ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಕೆಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ.
ಜಾತಿಜನಗಣತಿ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಒಬಿಸಿ, ಎಸ್ಸಿ/ಎಸ್ಟಿ ಸಮುದಾಯಗಳ ಸಚಿವರಿಂದ ಜಾತಿಜನಗಣತಿ ವರದಿ ಅಂಗೀಕಾರಕ್ಕೆ ಒತ್ತಡ ಹೆಚ್ಚುವ ಸಾಧ್ಯತೆ ಇದೆ.
ಇದನ್ನೂ ಓದಿ: ಶಾಸಕ ಸ್ಥಾನದಿಂದ ಗಾಲಿ ಜನಾರ್ದನ ರೆಡ್ಡಿ ಅನರ್ಹ
ಇನ್ನು ಒಕ್ಕಲಿಗ, ಲಿಂಗಾಯತ ಸಚಿವರಿಂದ ವರದಿಯ ಅಂಕಿ, ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುವ ಸಾಧ್ಯತೆಯೂ ಇದೆ. ಆಕ್ಷೇಪಣೆಗಳನ್ನ ಲಿಖಿತವಾಗಿ ಸಲ್ಲಿಸುವಂತೆ ಕಳೆದ ಸಂಪುಟ ಸಭೆಯಲ್ಲಿ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ,ಈವರೆಗೂ ಯಾವುದೇ ಸಚಿವರಿಂದ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಅದಲಾಗಿ ವರದಿ ಕುರಿತು ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ಅಭಿಪ್ರಾಯ ತಿಳಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದೀಗ ಸಿಎಂ ಹಾಗೂ ಎಸ್ಸಿ ಎಸ್ಟಿ/ಒಬಿಸಿ ಸಚಿವರ ಆಗ್ರಹಕ್ಕೆ ಒಪ್ಪಿಗೆ ಸಿಗುತ್ತಾ..ಇಲ್ಲವಾ ಎನ್ನುವುದು ಕುತೂಹಲ ಮೂಡಿಸಿದೆ.
ಇದೇ ವೇಳೆ, ಆಶಾ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹ ಧನ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ. ಆಶಾ ಕಾರ್ಯಕರ್ತೆಯರಿಗೆ ಇಂದಿನ ಸಭೆಯಲ್ಲಿ ಒಂದು ಸಾವಿರ ಪ್ರೋತ್ಸಾಹ ಧನ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ.
ಇದನ್ನೂ ನೋಡಿ: ಕಾರ್ಲ್ ಮಾರ್ಕ್ಸ್ ಜನ್ಮದಿನದ ವಿಶೇಷ :ಮಾರ್ಕ್ಸರವರ ಜೀವನ ಮತ್ತು ಚಿಂತನೆವಿಶ್ಲೇಷಣೆ ಡಾ. ಬಿ.ಆರ್. ಮಂಜುನಾಥ