ಪೋಕ್ಸೊ ಪ್ರಕರಣ: ಬಿಎಸ್‌ ಯಡಿಯೂರಪ್ಪ ಪರ ವಕೀಲರಿಗೆ ಮಹತ್ವದ ಸೂಚನೆ; ವಿಚಾರಣೆ ಮುಂದೂಡಿಕೆ

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪರ ವಕೀಲರಿಗೆ ಮಹತ್ವದ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿದೆ.

ಪೋಕ್ಸೊ ಪ್ರಕರಣದಲ್ಲಿ ಸಂಜ್ಞೇ ಪರಿಗಣಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂಐ ಅರುಣ್‌ ಏಕಸದಸ್ಯ ಪೀಠವು ನಡೆಸಿತು. ಪೋಕ್ಸೊ

ರಾಜ್ಯ ಸರ್ಕಾರದ ಪರವಾಗಿ ವಾದ ಆರಂಭಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್, ‘ವಿಚಾರಣಾಧೀನ ನ್ಯಾಯಾಲಯವು ಯಡಿಯೂರಪ್ಪ ಮತ್ತು ಇತರರ ವಿರುದ್ಧ ಸಂಜ್ಞೇ (ಕಾಗ್ನಿಜೆನ್ಸ್‌) ಪರಿಣಿಸಿರುವುದನ್ನು ಎರಡನೇ ಬಾರಿಗೆ ಪ್ರಶ್ನಿಸಿದ್ದಾರೆ. ಪ್ರಾಸಿಕ್ಯೂಷನ್‌ ಸಾಕ್ಷಿ ಆನಂದ್‌ ಆರಾಧ್ಯ ಮತ್ತು ಮನೋಜ್‌ ಅವರ ಹೇಳಿಕೆಯನ್ನು ವಿಚಾರಣಾಧೀನ ನ್ಯಾಯಾಲಯವು ಪರಿಗಣಿಸಿದೆ’ ಎಂದರು.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಕಟಣೆ: 18 ಆರೋಪಿಗಳ ಬಂಧನ

‘ಎಲ್ಲಾ ಸಾಕ್ಷಿಗಳ ಹೇಳಿಕೆಯ ನಂತರ ಸಂತ್ರಸ್ತೆಯ ಹೇಳಿಕೆಯನ್ನು ನ್ಯಾಯಾಲಯ ಆಲಿಸಿದೆ. ಸಂತ್ರಸ್ತೆಯು 2024 ರ ಫೆ. 2 ರಂದು ನಡೆದಿರುವ ಘಟನೆಯನ್ನು ನ್ಯಾಯಾಲಯಕ್ಕೆ ವಿವರಿಸಿದ್ದಾರೆ. ನನ್ನ ತಾಯಿಯನ್ನು ಹೊರಗಿರುವಂತೆ ಹೇಳಿ ಯಡಿಯೂರಪ್ಪ ಅವರು ತನ್ನನ್ನು ಮಾತ್ರ ಕೊಠಡಿಯೊಳಗೆ ಕರೆದೊಯ್ದಿದ್ದರು’ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರೊ. ರವಿವರ್ಮ ಕುಮಾರ್ ಹೇಳಿದ್ರು.

‘ಸಂತ್ರಸ್ತೆಯ ಹೇಳಿಕೆಯನ್ನು ನೋಡಿದರೆ ಪ್ರಕರಣದ ವಿಚಾರಣೆ ನಡೆಯಬೇಕಿದೆ. ಇಲ್ಲಿ ಇತರರ ಹೇಳಿಕೆಯನ್ನು ನ್ಯಾಯಾಲಯವು ಪರಿಗಣಿಸಿದರೆ, ಮೊದಲ ಸುತ್ತಿನಲ್ಲಿ ಸಮನ್ವಯ ಪೀಠವು ಉಲ್ಲೇಖಿಸಿರುವ ಅಂಶಗಳನ್ನು ಪೀಠಕ್ಕೆ ಮನವರಿಕೆ ಮಾಡಿಕೊಡುತ್ತಿರುವ ಪ್ರೊ. ಕುಮಾರ್.‌ ಸಂತ್ರಸ್ತೆಗೆ ಯಡಿಯೂರಪ್ಪ ಕಾಂಪ್ಲಿಮೆಂಟ್‌ ಕೊಟ್ಟಿದ್ದಾರೆ. ಮಗಳು ಒಳ್ಳೆಯವಳು ಕರೆದುಕೊಂಡು ಹೋಗು ಎಂದು ಹೇಳಿದ್ದಾರೆ. ಸಂತ್ರಸ್ತೆಯ ಹೇಳಿಕೆ ಮತ್ತು ಇತರ ಸಾಕ್ಷಿಗಳ ಹೇಳಿಕೆಯ ಕುರಿತು ಬಿಎಸ್‌ವೈ ಪರ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು ವಾದಿಸಿದ್ದರು. ಬೇರೆ ವಿಚಾರಗಳ ಕುರಿತು ವಾದಿಸಿಲ್ಲ. ಈ ಹಿಂದೆ ಸಮನ್ವಯ ಪೀಠವು ಎಲ್ಲವನ್ನೂ ಪರಿಗಣಿಸಿದೆ. ಈಗ ಅದನ್ನು ಮತ್ತೆ ಪರಿಶೀಲಿಸುವ ಅಗತ್ಯವಿಲ್ಲ’ ಎಂದು ಪೀಠ ಹೇಳಿತು.

ಹೀಗಾಗಿ, ನಿರ್ದಿಷ್ಟ ವಿಚಾರಕ್ಕೆ ಸಂಬಂಧಿಸಿದಂತೆ ವಾದಿಸಲು ನಾಗೇಶ್‌ ಅವರನ್ನು ಕರೆತನ್ನಿ ಎಂದು ಹೇಳಿದ ನ್ಯಾಯಾಲಯ, ಅಕ್ಟೋಬರ್‌ 23ಕ್ಕೆ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?

ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಸಂತ್ರಸ್ತೆಯ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ನೆರವಾಗುವಂತೆ ಕೋರಲು ಸಂತ್ರಸ್ತೆ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು 2024ರ ಫೆಬ್ರವರಿ 2ರಂದು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ನಮ್ಮ ಜೊತೆ ಒಂಭತ್ತು ನಿಮಿಷ ಮಾತನಾಡಿ, ನಮಗೆ ಟೀ ಕುಡಿಸಿದರು. ಆನಂತರ ನನ್ನ ಮಗಳನ್ನು ಕೊಠಡಿಗೆ ಕರೆದೊಯ್ದು ಚಿಲಕ ಹಾಕಿಕೊಂಡಿದ್ದರು. ಈ ವೇಳೆ ಆಕೆಯ ಬಲಭಾಗದ ಸ್ತನವನ್ನು ಸ್ಪರ್ಶಿಸಿ ಲೈಂಗಿಕ ದೌರ್ಜನ್ಯವೆಸಗಿದ್ದರು. ಆಕೆ ಹೊರಹೋಗಲು ಬಾಗಿಲು ತೆರೆಯುವಂತೆ ಒತ್ತಾಯಿಸಿದ್ದಳು. ಆನಂತರ ಯಡಿಯೂರಪ್ಪ ಅವರೇ ಬಾಗಿಲು ತೆರೆದಿದ್ದು, ತಕ್ಷಣ ಓಡಿ ಬಂದ ನನ್ನ ಪುತ್ರಿ ಘಟನೆಯನ್ನು ವಿವರಿಸಿದಳು ಎಂದು ದೂರಲಾಗಿತ್ತು.

ಈ ಕುರಿತು ಯಡಿಯೂರಪ್ಪ ಅವರನ್ನು ಪ್ರಶ್ನಿಸಲಾಗಿ ಅದಕ್ಕೆ ಅವರು ನಿಮ್ಮ ಮಗಳಿಗೆ ರೇಪ್‌ ಆಗಿದೆಯೋ? ಇಲ್ಲವೋ? ಎಂಬುದನ್ನು ಚೆಕ್‌ ಮಾಡಲು ಹಾಗೆ ಮಾಡಿದೆ ಎಂದರು. ತಕ್ಷಣ ನಮ್ಮ ಕ್ಷಮೆಯಾಚಿಸಿದ ಯಡಿಯೂರಪ್ಪ ಅವರು ನಿಮಗೆ ಮೋಸ ಆಗಿರುವ ಬಗ್ಗೆ ಸಹಾಯ ಮಾಡುತ್ತೇನೆ ಎಂದರು. ಇದಕ್ಕೆ ನಾನು ಒಪ್ಪಲಿಲ್ಲ. ಅದಾಗ್ಯೂ, ಯಡಿಯೂರಪ್ಪ ಅವರು ಈ ವಿಚಾರವನ್ನು ಹೊರೆಗೆ ಬಾಯಿ ಬಿಡದಂತೆ ತಡೆಯಲು ತುಂಬಾ ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೊ ಕಾಯಿದೆ ಸೆಕ್ಷನ್‌ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿ (ಲೈಂಗಿಕ ಕಿರುಕುಳ) ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನೂ ನೋಡಿ: ಬಿಪಿಎಲ್ ರೇಷನ್ ಕಾರ್ಡ್ |”ರದ್ದಿಗೆ ಸಿದ್ದತೆ” ; ತಪ್ಪು ಯಾರದ್ದು?! Janashakthi Media

Donate Janashakthi Media

Leave a Reply

Your email address will not be published. Required fields are marked *