ಇಲಾಖೆಯ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೂಚನೆ

ಬೆಂಗಳೂರು: ಇಲಾಖೆಯ ಯೋಜನೆಗಳನ್ನು ತಪ್ಪದೇ ಅನುಷ್ಠಾನಕ್ಕೆ ತರಬೇಕು. ಇಲಾಖೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದರು. ಅನುಷ್ಠಾನ

ಬೆಂಗಳೂರಿನ ಬಾಲಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಸೆ-15 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರೊಂದಿಗೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಜಿಲ್ಲಾ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ ಸಂಬಂಧ ಈಗಾಗಲೇ ಬೌತಿಕವಾಗಿ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಇರುವುದನ್ನು ಅನುಷ್ಠಾನಗೊಳಿಸಲು ಸಚಿವರು ಸೂಚಿಸಿದರು. ಅಂಗನವಾಡಿ ಫಲಾನುಭವಿಗಳಾದ ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಮಾತೃಪೂರ್ಣ ಯೋಜನೆಯ ಸೌಲಭ್ಯವನ್ನು ಅವರ ಮನೆಗಳಿಗೆ ತಲುಪಲು (THR) ಕ್ರಮವಹಿಸಿ‌, ಅದರ ಸಾಧಕ ಬಾದಕಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು. ಜೊತೆಗೆ ಗೃಹಲಕ್ಷ್ಮಿ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ‌ ಆಗುವವರೆಗೂ ಅಧಿಕಾರಿಗಳು ನಿಗಾವಹಿಸಬೇಕು ಎಂದು ಹೇಳಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎಂ.ಎಸ್‌.ಅರ್ಚನಾ, ಜಂಟಿ ನಿರ್ದೇಶಕರಾದ ಡಾ‌.ಉಷಾ, ಪುಷ್ಪಾ ರಾಯರ್, ಗೀತಾ ಪಾಟೀಲ್ ಸೇರಿದಂತೆ ಕೇಂದ್ರ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಡಿಯೋ ನೋಡಿ:ಗ್ಯಾರಂಟಿ ಯೋಜನೆಗಳ ಸದುಪಯೋಗ ಕುರಿತು ತರಬೇತಿ ಕಾರ್ಯಕ್ರಮ

Donate Janashakthi Media

Leave a Reply

Your email address will not be published. Required fields are marked *