ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

 ಗದಗ: ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವತಃ ಮಕ್ಕಳೇ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಶಿಕ್ಷಕಿ ಎಎಸ್ ರಾಠೋಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಸಿಯೂಟ

ಕಳೆದ 15 ದಿನಗಳಿಂದ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆ ಹಣ್ಣು, ಪೌಷ್ಟಿಕ ಆಹಾರ ನೀಡುತ್ತಿಲ್ಲ. ಇನ್ನು ಮಧ್ಯಾಹ್ನ ಬಿಸಿ ಊಟ ಎಲ್ಲಾ ಮಕ್ಕಳಿಗೂ ಸಮರ್ಪಕವಾಗಿ ಕೊಡುತ್ತಿಲ್ಲ ಎಂಬ ಆರೋಪ ಮಕ್ಕಳದ್ದಾಗಿದೆ.

ಇಲ್ಲಿ 1 ರಿಂದ 7ನೇ ತರಗತಿಯವರೆಗೆ 441 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮಧ್ಯಾಹ್ನ 2:30 ರಿಂದ 3 ಗಂಟೆಗೆ ತಡವಾಗಿ ಬಿಸಿ ಊಟ ನೀಡುತ್ತಾರೆ. ಜೊತೆಗೆ ಕೇವಲ 1-2 ಕೆಜಿ ತರಕಾರಿಯಲ್ಲಿ 441 ಮಕ್ಕಳಿಗೆ ಬಿಸಿ ಊಟ ಹಂಚಿಕೆ ಮಾಡುತ್ತಾರೆ. ಧಾನ್ಯಗಳಿಲ್ಲದ ಮಸಾಲೆ ಮಿಶ್ರಿತ ತಿಳಿ ಸಾರು, ಹುಳು ಹತ್ತಿದ, ಬಲಿತ, ಕೊಳೆತ ತರಕಾರಿ ತಂದು ಊಟ ತಯಾರಿಸುತ್ತಾರೆ. ಇದರಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಮಕ್ಕಳದ್ದಾಗಿದೆ.ಆದರೆ ಲೆಕ್ಕ ಪುಸ್ತಕದಲ್ಲಿ ಎಲ್ಲವನ್ನೂ ದಾಖಲು ಮಾಡಿರುತ್ತಾರೆ ಎಂಬ ಆರೋಪ ಪಾಲಕರದ್ದಾಗಿದೆ.

ಶಾಲಾ ಶಿಕ್ಷಕರು ಮಾತನಾಡಿ, ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವ ಕುರಿತು ನಮಗೆ ತಿಳಿದಿಲ್ಲ. ಸಮಸ್ಯೆಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹರಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಸಾಕ್ಷ್ಯಾಧಾರಗಳು, ಅಂಕಿ-ಅಂಶಗಳೆಂದರೆ ಇವರಿಗೇಕೆ ಇಷ್ಟೊಂದು ಹಗೆತನ !

ಆದರೆ ದೂರುಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೆ, ಶಾಲಾ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿ, ಅಧಿಕಾರಿಗಳು ಕ್ರಮ ಕೈಗೊಳ್ಳದ ಹೊರತು ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಶಾಲಾ ಮುಖ್ಯೋಪಾಧ್ಯಾಯ ಎಎಸ್ ರಾಥೋಡ್ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಗಳು ಬರುವಂತೆ ಮಕ್ಕಳು ಆಗ್ರಹಿಸಿದ್ದಾರೆ. ಶಿಕ್ಷಕಿ ವರ್ಗಾವಣೆ ಆಗುವವರೆಗೆ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಪಟ್ಟು ಹಿಡಿದಿದ್ದಾರೆ.

ನಂತರ ಸ್ಥಳಕ್ಕೆ ಗಜೇಂದ್ರಗಡ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌ಎನ್ ಹುರಳಿ ಭೇಟಿ ನೀಡಿ, ಮಕ್ಕಳು ಹಾಗೂ ಪಾಲಕರ ಮನವೊಲಿಸಲು ಮುಂದಾಗಿದ್ದಾರೆ. ಇಂದು ಮುಖ್ಯ ಶಿಕ್ಷಕಿ ರಜೆ ಇದ್ದು, ಆದಷ್ಟು ಬೇಗ ಪರಿಶೀಲನೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.

ವಿಡಿಯೋ ನೋಡಿ: ಇದು ಶಾಲೆಯಾ? ಅಥವಾ ಸ್ವಿಮ್ಮಿಂಗ್ ಫೂಲ್! ಶಾಸಕರೆ ಉತ್ತರಿಸಿ Janashakthi Media

Donate Janashakthi Media

Leave a Reply

Your email address will not be published. Required fields are marked *