- ಮೂರು ತಿಂಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ
- ಅವಿಶ್ವಾಸ ನಿರ್ಣಯ ವಜಾಗೊಳಿಸಿದ್ದ ಸಂಸತ್ ಸ್ಪೀಕರ್
- ಸ್ಪೀಕರ್ ನಿರ್ಧಾರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ
ಇಸ್ಲಾಮಾಬಾದ್: ಪಾಕಿಸ್ತಾನ ಅಧ್ಯಕ್ಷ ಆರೀಫ್ ಅಲ್ವಿ ಭಾನುವಾರ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ್ದು, 90 ದಿನಗಳಲ್ಲಿ ಚುನಾವಣೆ ನಡೆಯಲಿದೆ.
ಪ್ರಧಾನಿ ಅವರ ಸಲಹೆ ಮೇರೆಗೆ ಅಧ್ಯಕ್ಷ ಅಲ್ವಿ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಫಾರೂಖ್ ಹಬೀಬ್ ಹೇಳಿದ್ದಾರೆ.
ಸಚಿವರು ನೀಡಿರುವ ಮಾಹಿತಿಯ ಪ್ರಕಾರ 90 ದಿನಗಳಲ್ಲಿ ಚುನಾವಣೆ ನಡೆಯಲಿದೆ. 342 ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ ಬಹುಮತ ಕಳೆದುಕೊಂಡಿದೆ.
ಅವಿಶ್ವಾಸ ನಿರ್ಣಯ ತಿರಸ್ಕಾರ ಮಾಡಿರುವುದನ್ನು ಇಮ್ರಾನ್ ಖಾನ್ ಸ್ವಾಗತಿಸಿದ್ದಾರೆ. ದೇಶ ಈಗ ಹೊಸ ಚುನಾವಣೆಗೆ ಸಜ್ಜಾಗಬೇಕಿದೆ. ಅವಿಶ್ವಾಸ ನಿರ್ಣಯ ವಾಸ್ತವದಲ್ಲಿ ವಿದೇಶಿ ಅಜೆಂಡಾ ಆಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.