ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವವರಿಗೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸಂಚಾರಿ ಪೊಲೀಸ್ ಇಲಾಖೆಯ ಕ್ರಮಕ್ಕೆ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ಮುಗಿಬಿದ್ದಿದ್ದಾರೆ.
ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಚಾರಿ ಪೊಲೀಸರು ಎಷ್ಟೇ ನಿಯಮಗಳನ್ನು ರೂಪಿಸಿದರೂ ನಿಯಮ ಉಲ್ಲಂಘನೆ ನಡೆಯುತ್ತಲೇ ಇದ್ದು, ಮತ್ತೊಂದು ನಿಯಮ ಜಾರಿಗೊಳಿಸಿರುವ ಸಂಚಾರಿ ಪೊಲೀಸ್ ಇಲಾಖೆ ಫೆಬ್ರವರಿ 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ಘೋಷಣೆ ಮಾಡಿ ಸಿಹಿ ಸುದ್ದಿ ನೀಡಿದೆ.
ಇದನ್ನು ಓದಿ: ಸಂಚಾರಿ ನಿಯಮ ಉಲ್ಲಂಘನೆ: ಬಿಎಂಟಿಸಿ, ಕೆಎಸ್ಆರ್ಟಿಸಿಗೆ ಎರಡು ಕೋಟಿ ದಂಡ
ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ
ಹೊಸ ನಿಯಮ ಜಾರಿಗೊಳಿಸಿದ ಸಂಚಾರಿ ಪೊಲೀಸ್ ಇಲಾಖೆಯ ಕ್ರಮಕ್ಕೆ ವಾಹನ ಸವಾರರು ನೀರೀಕ್ಷೆಗೂ ಮೀರಿ ಸ್ಪಂದಿಸುತ್ತಿದ್ದಾರೆ. ಸಂಚಾರಿ ಪೊಲೀಸ್ ಇಲಾಖೆಗೆ ಒಂದೇ ದಿನ 5 ಕೋಟಿ 61 ಲಕ್ಷದ 55 ಸಾವಿರ ದಂಡದ ಹಣ ಸಂಗ್ರಹವಾಗಿದೆ. ಒಟ್ಟು 2 ಲಕ್ಷ 1,828 ಪ್ರಕರಣಗಳು ಇತ್ಯರ್ಥ್ಯಗೊಂಡಿವೆ. ಪೊಲೀಸ್ ಠಾಣೆಗಳಲ್ಲಿ 89,699 ಪ್ರಕರಣಗಳಿಂದ 2,17,24,990 ಕೋಟಿ ರೂ, ಪೇಟಿಎಂ ಮೂಲಕ 1,04,273 ಪ್ರಕರಣದಿಂದ 3,23,68,900 ಕೋಟಿ, ಸಂಚಾರ ನಿರ್ವಹಣಾ ಕೆಂದ್ರದಲ್ಲಿ 540 ಪ್ರಕರಣ ದಂಡ ಪಾವತಿಯಾಗಿದ್ದು 89,650 ರೂ ಮತ್ತು ಬೆಂಗಳೂರು ಒನ್ ನಲ್ಲಿ 7,316 ಪ್ರಕರಣದಿಂದ 16,21,600 ರೂ ದಂಡ ಸಂಗ್ರಹವಾಗಿದೆ.
ಒಟ್ಟಾರೆ 2,01,828 ಪ್ರಕರಣಗಳಿಗೆ ಸಂಬಂಧಿಸಿ 5,61,45,000 ರೂ. ದಂಡ ಸಂಗ್ರಹವಾಗಿದೆ. ಅದರಲ್ಲೂ ನೆನ್ನೆ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಕೇವಲ 3 ಗಂಟೆ ಅವಧಿಯಲ್ಲಿ 17 ಸಾವಿರ ನಿಯಮ ಉಲ್ಲಂಘನೆ ಪ್ರಕರಣದ ದಂಡ ಪಾವತಿಯಾಗಿದೆ. ಪೇಟಿಎಂ ಮೂಲಕವೇ 53 ಲಕ್ಷ ದಂಡ ಪಾವತಿಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರಿಂದ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ಓಲಾ, ಊಬರ್, ರ್ಯಾಪಿಡೋ ಸೇವೆ ರದ್ದುಗೊಳಿಸಲು ಆಟೋ ಚಾಲಕರ ಆಗ್ರಹ
ನೋಟಿಸಿಗೂ ಸ್ಪಂದನೆ ಇರುತ್ತಿರಲಿಲ್ಲ; ಪೊಲೀಸ್ ಆಯುಕ್ತ ಸಲೀಂ
ಸಂಚಾರ ವಿಭಾಗ ವಿಶೇಷ ಪೊಲೀಸ್ ಆಯುಕ್ತ ಸಲೀಂ ಪ್ರತಿಕ್ರಿಯಿಸಿದ್ದು, ಸಂಗ್ರಹವಾದ ದಂಡದ ಮೊತ್ತದ ಶೇಕಡಾ 90ರಷ್ಟು ಆನ್ಲೈನ್ ಮೂಲಕವೇ ಪಾವತಿಯಾಗಿದೆ. ನಿಯಮ ಉಲ್ಲಂಘಿಸಿದ ವಾಹನ ಮಾಲೀಕರಿಗೆ ನೋಟಿಸು ಹೋಗುತ್ತಿದ್ದರೂ ಸಹ ಬಹಳಷ್ಟು ವಾಹನ ಸವಾರರು ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಅದನ್ನು ವಿಲೇವಾರಿ ಮಾಡುವುದು ನಮಗೆ ಸವಾಲಾಗಿತ್ತು. ಈ ಬಗ್ಗೆ ಸರ್ಕಾರಕ್ಕೆ ಸಾರಿಗೆ ಇಲಾಖೆಯು ಮನವಿ ಮಾಡಿಕೊಂಡಿತ್ತು. ದಂಡ ಪಾವತಿಗೆ ರಿಯಾಯಿತಿ ನೀಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನಿಯಮ ಉಲ್ಲಂಘಿಸಿದವರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಇದನ್ನು ಓದಿ: ಕಾರಿನ ಹಿಂಬದಿ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸದಿದ್ದರೆ 1000 ರೂ ದಂಡ
ಸಂಚಾರಿ ಪೊಲೀಸರು ಸುಮಾರು 44 ತರಹದ ನಿಯಮಗಳ ಉಲ್ಲಂಘಟನೆಯ ಪಟ್ಟಿ ಬಿಡುಗಡೆ ಮಾಡಿದೆ. ಅಲ್ಲದೆ, ಬಾಕಿ ಇರುವ ನಿಯಮ ಉಲ್ಲಂಘನೆ ವಿವರ ಪಡೆಯಲು ಕರ್ನಾಟಕ ಓನ್ ಅಂತರ್ಜಾಲ ತಾಣದಲ್ಲಿ ಪರಿಶೀಲಿಸಬಹುದಾಗಿದೆ. ಅದರೊಂದಿಗೆ, ದಂಡವನ್ನು ಸಹ ಪಾವತಿ ಮಾಡಬಹುದು. ಪೇಟಿಎಂ ಆ್ಯಪ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರ ಒದಗಿಸಿದ್ದಲ್ಲಿ ದಂಡದ ವಿವರ ಪಡೆದುಕೊಳ್ಳಬಹುದು. ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ. ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲಿ ಮಾಹಿತಿ ಸಿಗಲಿದೆ. ಈ ನಿಯಮ 11-02-2023 ವರಗೆ ಮಾತ್ರ ಅನ್ವಯವಾಗುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ನಗರದಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುವವ ಸಂಖ್ಯೆ ಏನೂ ಕಡಿಮೆಯಾಗಿಲ್ಲ. ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಆಕಡೆ ಈಕಡೆ ನೋಡಿ ಪೊಲೀಸರು ಇಲ್ಲಾ ಎಂದು ಖಚಿತವಾಗುತ್ತಿದ್ದಂತೆ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಾರೆ. ಆದರೆ ಇನ್ನು ಮುಂದೆ ಹೀಗೆ ಮಾಡಿದ್ದಲ್ಲಿ ಒಂದೇ ದಿನ ಅನೇಕ ಬಾರಿ ದಂಡ ಕಟ್ಟಬೇಕಾಗಬಹುದು. ಬೆಂಗಳೂರಿನಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಓಡಿದ ಎಲ್ಲಾ ವಿವರಗಳು ಕ್ಯಾಮರಾದಲ್ಲಿ ಸೆರೆಯಾಗಲಿದ್ದು, ಎಲ್ಲವೂ ದಂಡಕ್ಕೆ ಅರ್ಹವಾಗುತ್ತದೆ.
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಕ್ಯಾಮೆರಾ ಇರುವ ಮೂರು ಸಿಗ್ನಲ್ಗಳಲ್ಲಿ ಸಂಚರಿಸಿದರೆ ಮೂರು ಬಾರಿ ಪ್ರತ್ಯೇಕ ದಂಡ ಕಟ್ಟಬೇಕಾಗಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಒಟ್ಟು 50 ಜಂಕ್ಷನ್ಗಳಲ್ಲಿ 280 ಎಎನ್ಪಿಆರ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹೆಲ್ಮೆಟ್ ರಹಿತ ಚಾಲನೆಯ ದಂಡದ ಮೊತ್ತ 500 ರೂಪಾಯಿ. ಒಂದು ದಿನದಲ್ಲಿ ಮೂರು ಬಾರಿ ಸಂಚಾರಿ ನಿಮಯ ಉಲ್ಲಂಘನೆ ಮಾಡಿದ್ದಲ್ಲಿ ಒಂದೂವರೆ ಸಾವಿರ ರೂಪಾಯಿ ದಂಡ ಪಾವತಿಸಬೇಕು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ