ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇಂದು (ಸೋಮವಾರ) ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್ ಸೇರಿದಂತೆ ವೆಲ್ಲೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ವೇಗ ಪಡೆದುಕೊಂಡ ಮಾಂಡೌಸ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರೀ ಮಳೆ
ಭಾರಿ ಮಳೆಯಿಂದಾಗಿ ಚೆನ್ನೈಗೆ ತೆರಳುತ್ತಿದ್ದ ಆರಕ್ಕೂ ಹೆಚ್ಚು ವಿಮಾನಗಳನ್ನು ಬೆಂಗಳೂರಿಗೆ ಮಾರ್ಗ ಬದಲಿಸಲಾಗಿದೆ. ಜತೆಗೆ, 12ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.ಚೆನ್ನೈನ ಮೀನಬ್ಯಾಕ್ಕಂನಲ್ಲಿ ಇಂದು ಮುಂಜಾನೆ 5:30 ರ ವರೆಗೆ 13.7 ಸೆಂ.ಮೀ ಮಳೆಯಾಗಿದೆ.
ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಸಾಧಾರಣ ಮಳೆ ಎಂದು ಹವಾಮಾನ ಇಲಾಖೆ ತಿಳಿಸಿದೆ.