ಹಾಸನ: ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಿರ್ಮಾಣವಾಗಿರುವ ರಾಜ್ಯದಲ್ಲೆ ಮೊದಲ ನಿವೃತ್ತ ಪ್ಯಾರ ಮಿಲಿಟರಿ ಕಟ್ಟಡ ಉದ್ಘಾಟನೆಯು ಫೆಬ್ರವರಿ 15 ರಂದು ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ಪ್ಯಾರ
ನಗರದ ಹೆಚ್.ಡಿ.ಸಿ.ಸಿ. ಬ್ಯಾಂಕ್ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಇತರರು ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ನಿವೃತ್ತ ಮಿಲಿಟರಿಯವರ ನೂತನ ಕಟ್ಟಡ ಉದ್ಘಾಟನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೇರಿದಂತೆ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: ನಮ್ಮ ಮೆಟ್ರೊ : ಪ್ರಯಾಣ ದರ ಹೆಚ್ಚಿಸಿದ್ದು ಬಿಎಂಆರ್‌ಸಿಎಲ್; ನಮ್ಮ ಸರ್ಕಾರ ಅಲ್ಲ – ಸಿಎಂ ಸಿದ್ದರಾಮಯ್ಯ
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಿಂದ ಕಟ್ಟಡ ಉದ್ಘಾಟನೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ನಡೆಸಲಾಗಿದ್ದು, ಅಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ. ಜಿಲ್ಲೆಯ ಎಲ್ಲಾ ತಾಲೂಕಿನಿಂದಲೂ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಆಗಮಿಸಲಿದ್ದಾರೆ ಎಂದು ಹೇಳಿದರು.
ಇದೆ ವೇಳೆ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ್, ನಗರಸಭೆ ಅಧ್ಯಕ್ಷಎಂ. ಚಂದ್ರೇಗೌಡ, ಸ್ವಾಮೀಗೌಡ, ಸದಸ್ಯರಾದ ವಾಸುದೇವ್, ನರೇಂದ್ರಬಾಬು, ಎಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಬಿದರಿಕೆರೆ ಜಯರಾಂ, ಜೆಡಿಎಸ್ ಪಕ್ಷದ ವಕ್ತಾರ ರಘು ಹೊಂಗೆರೆ ಇತರರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಬೆಂಗಳೂರು ಏರ್ ಶೋ : ಉಕ್ಕಿನ ಹಕ್ಕಿಗಳ ಮ್ಯಾಜಿಕ್ #AeroShow2025 #AeroShowBengaluru Janashakthi Media