ಬೆಂಗಳೂರು : ರಾಜ್ಯದಲ್ಲಿ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಳಿದ್ದಾರೆ.
ರಾಜ್ಯದಲ್ಲಿ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ವಿಚಾರದ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು| ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ವಂಚಿಸಿದ ರೈಲ್ವೆ ಅಧಿಕಾರಿ ಬಂಧನ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ನಲ್ಲಿ ಬಿಜೆಟ್ ಇದೆ. ಈ ವೇಳೆ ರಾಜ್ಯದಲ್ಲಿ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ತಂದ್ರೆ ಲಾಭವಾಗುತ್ತಾ? ಇಲ್ವಾ? ರಾಜ್ಯಗಳಿಗೆ ಲಾಭವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದರು.
ಕೇಂದ್ರ ಸರ್ಕಾರ ಸಹಕಾರ ನೀಡಿದರೆ ರಾಜ್ಯದಲ್ಲಿ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್ ಸೇರಿಸಬಹುದು. ನಮಗೆ ತೊಂದರೆಯಾಗುತ್ತದೆ ಅಂದ್ರೆ ಯೋಚನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ : ಮನುವಾದಿ ಅಮಿತ್ ಶಾ ವಜಾಕ್ಕೆ ದಲಿತ ಹಕ್ಕುಗಳ ಸಮಿತಿ ಆಗ್ರಹ Janashakthi Media