ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಸ್ಥಳಗಳ ಸೇರ್ಪಡೆ

 ಬೆಂಗಳೂರು: ಯೂನೆಸ್ಕೊ (UNESCO)ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹಾಸನ ಜಿಲ್ಲೆಯ ಬೇಲೂರು, ಹಳೆವಬೀಡು ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲ ಹಾಗೂ ಪಶ್ಚಿಮ ಬಂಗಾಳದ ಶಾಂತಿನಿಕೇತನಗಳನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ವಿಶ್ವ ಪಾರಂಪರಿಕ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಯ್ಸಳರ  ಕಾಲದ ಕಲಾಕೃತಿಗಳು ಭವ್ಯ ಕೆತ್ತನೆಗಳಾಗಿವೆ. ಹೊಯ್ಸಳ ದೇವಾಲಯಗಳ ಸೌಂದರ್ಯ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ. ಇದು ನಮ್ಮ ಪೂರ್ವಜರ ಅಸಾಧಾರಣ ಕಲೆಗೆ ಸಾಕ್ಷಿಯಾಗಿದೆ. ಭಾರತೀಯರಿಗೂ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಒಂದು ದೇಶ, ಒಂದು ಚುನಾವಣೆ : ಸಂಸದೀಯ ಪ್ರಜಾಪ್ರಭುತ್ವದಿಂದ ಅಧ್ಯಕ್ಷೀಯ ಸರ್ವಾಧಿಕಾರದೆಡೆಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ.ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವ ಮಟ್ಟದ ಮೂಲಸೌಲಭ್ಯ ಹಾಗೂ ಸುರಕ್ಷತೆ ಒದಗಿಸಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ . ಐತಿಹಾಸಿಕ ಸ್ಥಳಗಳು ಮತ್ತು  ಪುಣ್ಯಕ್ಷೇತ್ರಗಳ ತೊಟ್ಟಿಲು ಕರ್ನಾಟಕಕ್ಕೆ ಸ್ವಾಗತ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ವಿಡಿಯೋ ನೋಡಿ: ಹಿಂದುತ್ವ ರಾಜಕಾರಣ : ಸಿದ್ದಾಂತದ ವ್ಯವಹಾರಕ್ಕೆ ಹಿಂದುಳಿದ ವರ್ಗವೇ ಟಾರ್ಗೆಟ್ ! Janashakthi Media

Donate Janashakthi Media

Leave a Reply

Your email address will not be published. Required fields are marked *