ಕೃಷಿ ಪಂಪ್ ಸೆಟ್ ಗಳಿಗೆ 3 ಫೇಸ್ ವಿದ್ಯುತ್ ಪೂರೈಕೆ ಹೆಚ್ಚಳ: ಕೆ.ಜೆ. ಜಾರ್ಜ್

ಬೆಂಗಳೂರು: ಈಗಿರುವ 7 ಗಂಟೆಯ ಜೊತೆಗೆ ಹೆಚ್ಚುವರಿಯಾಗಿ 2 ಗಂಟೆ 3 ಫೇಸ್ ವಿದ್ಯುತ್ ಪೂರೈಕೆಯನ್ನು ಕೃಷಿ ಪಂಪ್ ಸೆಟ್ ಗಳಿಗೆ ಒದಗಿಸುವ ಬಗ್ಗೆ ಪರಿಶೀಲಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ರೈತರು ಬೇಸಿಗೆಯಲ್ಲಿ ಭತ್ತ, ರಾಗಿ, ಕಬ್ಬು ಮುಂತಾದ ಬೆಳೆ ಬೆಳೆದಿದ್ದಾರೆ. ತಾಪಮಾನ ಏರಿಕೆಯಾಗುತ್ತಿದೆ. ನಿರಂತರ ವಿದ್ಯುತ್ ಪೂರೈಕೆ ಮಾಡಬೇಕಿದೆ. ಹೆಚ್ಚುವರಿಯಾಗಿ ಕೃಷಿ ಪಂಪ್ ಸೆಟ್ ಗಳಿಗೆ 2 ಗಂಟೆ ತ್ರೀಫೇಸ್ ನೀಡಬೇಕೆಂದು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವೈದ್ಯರ ಕಡ್ಡಾಯ ಸೇವೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಉತ್ತರ ನೀಡಿದ ಸಚಿವರು, ಪ್ರಸ್ತುತ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದೆ. ಆದರೆ, ಕೆಲವು ಸಬ್ ಸ್ಟೇಷನ್ ಗಳಲ್ಲಿ ಹೆಚ್ಚು ಸಾಮರ್ಥ್ಯ ಇಲ್ಲ. ಹೀಗಾಗಿ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

ಅಕ್ರಮ ನೀರಾವರಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವಂತೆ ಅನೇಕ ವರ್ಷಗಳಿಂದ ಬೇಡಿಕೆ ಇದ್ದು, ಇನ್ನೊಂದು ವರ್ಷದಲ್ಲಿ ಅಕ್ರಮ -ಸಕ್ರಮ ಯೋಜನೆಯಡಿ ವಿದ್ಯುತ್ ಸಂಪರ್ಕ ಕಾರ್ಯ ಪೂರ್ಣಗೊಳ್ಳಲಿದೆ. ಕೃಷಿ ಪಂಪ್ಸೆಟ್ ಗಳಿಗೆ ಹಗಲು ನಿರಂತರವಾಗಿ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ತಾಂತ್ರಿಕ ಸಾಧ್ಯತೆ ಇಲ್ಲದಿರುವ ಸಂದರ್ಭದಲ್ಲಿ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲು 4 ಗಂಟೆ, ರಾತ್ರಿ 3 ಗಂಟೆ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ.

ಕೆಲವು ಕಡೆ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಿದರೆ ಪಂಪ್ಸೆಟ್ ಗಳಿಗೆ ಸಾಮರ್ಥ್ಯವಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಹೀಗಾಗಿ ಎರಡು ಪಾಳಿಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ನೋಡಿ: ಕೆಲಸದ ಅವಧಿ ಹೆಚ್ಳಳದ ವಿರುದ್ಧ ಐಟಿ ನೌಕರರ ಪ್ರತಿಭಟನೆ | ಉತ್ತಮ ಉದ್ಯೋಗ ಸಮತೋಲನ ಆರೋಗ್ಯಕ್ಕೆ ಆಗ್ರಹ Janashakthi

Donate Janashakthi Media

Leave a Reply

Your email address will not be published. Required fields are marked *