ಅರಿವು ಸಾಲದ ಮೊತ್ತ ₹ 5 ಲಕ್ಷಕ್ಕೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸರ್ಕಾರಿ ಕೋಟಾದಡಿ ವೈದಕೀಯ ಸೀಟು ಪಡೆಯುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು ₹ 3 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಸಾಲದ 

ಮಂಗಳವಾರ (ಅಕ್ಟೋಬರ್‌-10) ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಸಾಲದ 

ಇದನ್ನೂ ಓದಿ:ಶಿಕ್ಷಣ ಮತ್ತು ಆರೋಗ್ಯದ ಮೇಲೆ ವೆಚ್ಚ ಪ್ರಮಾಣ ಕರ್ನಾಟದಲ್ಲಿ ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ:4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ| ಸಿಎಂ ಸಿದ್ದರಾಮಯ್ಯ

ವಸತಿ ಇಲಾಖೆಯ ಸ್ವಂತ ಸಂಪನ್ಮೂಲ ಕ್ರೋಡೀಕರಣಕ್ಕೆ ನೀತಿ:

ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೋಡೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು, ನಸೀರ್‌ ಅಹ್ಮದ್‌, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೋ ನೋಡಿ:ಸಂವಿಧಾನ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ – ಪಿ.ಸಾಯಿನಾಥ್ Janashakthi Media

Donate Janashakthi Media

Leave a Reply

Your email address will not be published. Required fields are marked *