ಹೆಚ್ಚುತ್ತಿರುವ ಕೊರೊನಾ ಸೋಂಕು : ಐಪಿಎಲ್ ಮ್ಯಾಚ್‍ ವೀಕ್ಷಣೆಗೆ ನೂತನ ಮಾರ್ಗಸೂಚಿ ಹೊರಡಿಸಲು ನಿರ್ಧಾರ

ಬೆಂಗಳೂರು : ಐಪಿಎಲ್ ಮ್ಯಾಚ್‍ಗಳಿಂದಾಗಿ ಎಲ್ಲೆಡೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆಯೇ? ಇತ್ತಿಚಿನ ಸೋಂಕು ಏರಿಕೆ ಪ್ರಕರಣಗಳನ್ನು ಗಮನಿಸಿದರೆ ಅದು ನಿಜ ಎನಿಸುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಪಂದ್ಯ ವೀಕ್ಷಿಸಲು ಹೊಸ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಿದೆ.ಮೊನ್ನೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಮುಂಬೈ ತಂಡಗಳ ನಡುವಿನ ಪಂದ್ಯಕ್ಕೆ ಸಾವಿರಾರು ಪ್ರೇಕ್ಷಕರು ಸಾಕ್ಷಿಯಾಗಿದ್ದರು.

ಕ್ರೀಡಾಂಗಣದ ಜತೆಗೆ ಹೊರಭಾಗದಲ್ಲೂ ಸಹಸ್ರಾರು ಮಂದಿ ಅಭಿಮಾನಿಗಳು ಜಮಾಯಿಸಿದ್ದರು. ದಿನೇ ದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಸಂದರ್ಭದಲ್ಲೇ ಹೀಗೆ ಲಕ್ಷಾಂತರ ಮಂದಿ ಒಂದೇ ಕಡೆ ಜಮಾಯಿಸಿದರೆ ಸೋಂಕು ಉಲ್ಬಣಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.
ಪಂದ್ಯ ನಡೆದ ಮರುದಿನ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದನ್ನೇ ಮಾನದಂಡ ಮಾಡಿಕೊಂಡಿರುವ ಆರೋಗ್ಯ ಇಲಾಖೆ ಇನ್ನು ಮುಂದೆ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಹೊಸ ರೂಲ್ಸ್ ಜಾರಿ ಮಾಡಲು ಮುಂದಾಗಿದೆ.

ಮುಂದಿನ ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಲೇಬೇಕಾಗಿದೆ. ಇದರ ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ರೂಲ್ಸ್ ಜಾರಿಗೆ ತರಲು ತೀರ್ಮಾನಿಸಿದ್ದೇವೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಾ.ರಂದೀಪ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ದೇಶದಲ್ಲಿ 444 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆ

ಕಳೆದ ಮಾ.29 ರಂದು ನಗರದಲ್ಲಿ 75 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದವು, 30 ರಂದು 143 ಹಾಗೂ 31 ರಂದು 170 ಪ್ರಕರಣಗಳು ದೃಢಪಟ್ಟಿದ್ದವು. ಏ.1ರಂದು 146 ಹಾಗೂ ಏ.2ರಂದು 170 ಹಾಗೂ ಏ.3 ರಂದು 109 ಪ್ರಕರಣಗಳು ದಾಖಲಾಗಿದ್ದವು.
ಈ ಅಂಕಿ ಅಂಶಗಳನ್ನು ಗಮನಿಸಿದರೆ ನಗರದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಅದರಲ್ಲೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದ ಸಂದರ್ಭದಲ್ಲೇ ಸೋಂಕು ಏರಿಕೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *