ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯಂಟಿ ಸೈಬರ್ ಕಾನೂನು ಜಾರಿಗೆ ತರಲು ಒಂದು ಅಜೆಂಡಾ ರೂಪಿಸಲು ಜವಾಬ್ದಾರಿ ಕೊಟ್ಟಿದ್ದಾರೆ.ನಾವು ಸದ್ಯದಲ್ಲೇ ಅದನ್ನ ಪ್ರಕಟಣೆ ಮಾಡ್ತೀವಿ. ಸೈಬರ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ನಿತ್ಯ ಸಾವಿರಾರು ಪ್ರಕರಣಗಳು ದಾಖಲಾಗ್ತಿವೆ. ಇನ್ಮೇಲೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಹೆಚ್ಚು ಸೈಬರ್ ಪ್ರಕರಣಗಳೇ ಆಗ್ತಿವೆ ಎಂದು ತಿಳಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಅವುಗಳನ್ನು ನಿಯಂತ್ರಣ ಮಾಡಲು ಕಾನೂನುಗಳು ಅಷ್ಟೊಂದು ಬಲಿಷ್ಠವಾಗಿಲ್ಲ. ಅದಕ್ಕಾಗಿ ನಾವೊಂದು ಹೊಸ ಸೈಬರ್ ನೀತಿಯನ್ನು ತರ್ತಿದ್ದೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಬರ ನಿರ್ವಹಣೆ ವಿಚಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರವು ರಾಜ್ಯದಲ್ಲಿ ಇರುವ ಒಟ್ಟು 226 ತಾಲೂಕುಗಳಲ್ಲಿ 200 ತಾಲೂಕು ಬರಪೀಡಿತ ಪ್ರದೇಶ ಅಂತ ಘೋಷಣೆ ಮಾಡಲಾಗಿದೆ. ತುಮಕೂರು ಜಿಲ್ಲೆಯಲ್ಲಿ 10 ತಾಲೂಕುಗಳಲ್ಲಿ 1 ತಾಲೂಕನ್ನು ಮಾತ್ರ ಪರಿಗಣಿಸಿರಲಿಲ್ಲ. ಈಗ 10 ತಾಲೂಕುಗಳನ್ನ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದರು.
ನಮಗೆ ಹಣಕಾಸಿನ ಕೊರತೆಯಂತೂ ಸದ್ಯಕ್ಕೆ ಇಲ್ಲ. ಈಗಾಗಲೇ 19 ಕೋಟಿ ಹಣವನ್ನು ಜಿಲ್ಲಾಧಿಕಾರಿ ಅಕೌಂಟ್ಗೆ ಹಾಕಲಾಗಿದೆ. ಆ ಹಣವನ್ನು ಯಾವುದಕ್ಕೆ ಬಳಸಬೇಕು ಎಂಬ ಸೂಚನೆ ಸಹ ನೀಡಲಾಗಿದೆ ಎಂದು ಹೇಳಿದರು.