ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ; ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಸತ್ಯಾಗ್ರಹ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಆಗ್ರಹಿಸಿ  ಅನಿರ್ಧಿಷ್ಟಾವಧಿ ಸತ್ಯಾಗ್ರಹ  ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2021 ರಲ್ಲಿ 26 ವಿಷಯಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ ಮತ್ತು 1208 ಅಭ್ಯರ್ಥಿಗಳನ್ನು ಫೆಬ್ರವರಿ 03, 2023 ರಂದು ಪ್ರಕಟಿಸಿದ ಅಂತಿಮ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಅಧಿಕಾರಿಗಳು ಒಂದಲ್ಲ ಒಂದು ನೆಪ ಹೇಳಿ ನೇಮಕಾತಿ ಆದೇಶ ಪತ್ರ ನೀಡಲು ವಿಳಂಬ ಮಾಡುತ್ತಿದ್ದಾರೆ. ಅನೇಕ ಅಭ್ಯರ್ಥಿಗಳು ತಾವು ಕೆಲಸ ಮಾಡುತ್ತಿದ್ದ ಉದ್ಯೋಗಗಳನ್ನು ಕೈಬಿಟ್ಟಿದ್ದಾರೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು

ಇದನ್ನೂ ಓದಿ: ನಿರಂತರ ಮಳೆಗೆ ಕೊಡಗು ತತ್ತರ ; ವಿದ್ಯುತ್‌ ಸಂಪರ್ಕ ಸಂಪೂರ್ಣ ಕಡಿತ

ಆಯ್ಕೆಯಾಗಿರುವ ಬಹುತೇಕ ಅಭ್ಯರ್ಥಿಗಳು ಗ್ರಾಮೀಣ ಭಾಗದ ಬಡವರ್ಗದ ನಿರುದ್ಯೋಗಿಗಳಾಗಿದ್ದು, ನೇಮಕಾತಿ ಆದೇಶ ನೀಡುವಲ್ಲಿ ವಿಳಂಬವಾಗಿರುವುದರಿಂದಾಗಿ, ನಾವು ಯಾವುದೇ ಕೆಲಸವಿಲ್ಲದೇ ಮಾನಸಿಕವಾಗಿ ಕುಗ್ಗಿಹೋಗಿದ್ದೇವೆ ಎಂದು ಅಭ್ಯರ್ಥಿಗಳು ಅಸಹಾಯಕತೆ ಹೊರಹಾಕಿದ್ದಾರೆ.

ಇದೀಗ, ನೇಮಕಾತಿ ಆದೇಶ ನೀಡುವಂತೆ ಆಯ್ಕೆಯಾಗಿರುವ ಸಹಾಯಕ ಪ್ರಾಧ್ಯಾಪಕರು ಶಾಂತಿಯುತವಾಗಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕೂಡಲೆ ಸರ್ಕಾರ ಇವರ ಬೇಡಿಕೆಯನ್ನು ಈಡೇರಿಸಲು ಮುಂದಾಗಬೇಕಿದೆ. ಪದವಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸರ್ಕಾರ ಕೂಡಲೇ ಸಹಾಯಕ ಪ್ರಾಧ್ಯಪಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು, ಪೋಷಕರ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ನೋಡಿ: ಫ್ರಾನ್ಸ್ ಚುನಾವಣೆ : ನವ-ಫ್ಯಾಸಿಸ್ಟರಿಗೆ ಸೋಲು, ಎಡ ಪ್ರಗತಿಪರರಿಗೆ ಗೆಲುವು Janashakthi Media

Donate Janashakthi Media

Leave a Reply

Your email address will not be published. Required fields are marked *