ಸ್ವಾತಂತ್ರ್ಯ ಉದ್ಯಾನ ಏಕೈಕ ಪ್ರತಿಭಟನಾ ಸ್ಥಳ: ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವು ನಗರದ ಏಕೈಕ ಪ್ರತಿಭಟನಾ ಸ್ಥಳವಾಗಿ ಮುಂದುವರಿಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆಗಸ್ಟ್‌ 4ರಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸಮರ್ಪಕವಾಗಿದೆ. ಅದನ್ನು ಬದಲಾಯಿಸುವ ಯಾವುದೇ ಉದ್ದೇಶವಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಸಮಸ್ಯೆ ಇದ್ದರೆ ಅಥವಾ ಆ ಪ್ರದೇಶವು ಸಾಕಾಗದಿದ್ದರೆ ಮಾತ್ರ ಸ್ಥಳ ಬದಲಾವಣೆ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಿದ ಎಸ್‌ಐಟಿ ತಂಡಕ್ಕೆ ಸಿಎಂ ಪದಕ

ಈ  ಹಿಂದೆ ಟೌನ್ ಹಾಲ್, ಬನಪ್ಪ ಪಾರ್ಕ್ ಮತ್ತು ಮೌರ್ಯ ವೃತ್ತದ ಸುತ್ತಲೂ ಪ್ರತಿಭಟನೆ ನಡೆಸಲಾಗುತ್ತಿತ್ತು.  ಜನರಿಗೆ ಅನಾನುಕೂಲ ಉಂಟು ಮಾಡಿ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂಬ ನೆಪ ಒಡ್ಡಿ  ನಗರ ಪೊಲೀಸರು 2021 ರ ಆದೇಶದಲ್ಲಿ ನಗರದಲ್ಲಿ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸಿದ್ದರು.

ಜನರು ಪರಿಣಾಮಕಾರಿಯಾಗಿ ಪ್ರತಿಭಟಿಸುವ ಹಕ್ಕನ್ನು ಪೊಲೀಸರು ನಿರಾಕರಿಸುತ್ತಿದ್ದಾರೆ. ಪ್ರತಿಭಟನೆಯನ್ನು ಒಂದೇ ಸ್ಥಳಕ್ಕೆ ಸೀಮಿತಗೊಳಿಸಲಾಗುತ್ತಿದೆ ಎಂದು ನಾಗರಿಕ ಕಾರ್ಯಕರ್ತರಿಂದ ಹಲವಾರು ದೂರುಗಳು ಬಂದಿತ್ತು. ಪ್ರದರ್ಶನಗಳನ್ನು ಒಂದು ಸ್ಥಳಕ್ಕೆ ಸೀಮಿತಗೊಳಿಸುವುದರಿಂದ ಅವರ ಸಮಸ್ಯೆಗಳತ್ತ ಗಮನ ಕಡಿಮೆಯಾಗುತ್ತದೆ ಮತ್ತು ಪ್ರತಿಭಟನೆಗಳು ನಿಷ್ಪರಿಣಾಮಕಾರಿಯಾಗುತ್ತವೆ ಎಂದು ಅನೇಕ ಕಾರ್ಯಕರ್ತರ ವಾದವಾಗಿದೆ.

2021 ರ ಆದೇಶದ ಹೊರತಾಗಿಯೂ, ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಫ್ರೀಡಂ ಪಾರ್ಕ್ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರಿಗೆ ಜುಲೈ 5 ರಂದು ಬೆಳಿಗ್ಗೆ 9.30 ಕ್ಕೆ ಲಾಲ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಯಿತು. ಅದೇ ದಿನ, ಶಾಂತಿನಗರದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ನೋಡಿ: ಕಲ್ಬುರ್ಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣರಾರು? Janashakthi Media

Donate Janashakthi Media

Leave a Reply

Your email address will not be published. Required fields are marked *