ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಸಚಿವ ಪರಮೇಶ್ವರ ವಿಶ್ವಾಸ

ತುಮಕೂರು:ಮುಂದಿನ ಬಾರಿ ಕೇಂದ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳು ಸೇರಿಕೊಂಡು ರಚಿಸಿಕೊಂಡಿರುವ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ,ಹಿಂದೆ ಮನಮೋಹನ್‌ ಸಿಂಗ್‌ ಹತ್ತು ವರ್ಷ ಪ್ರಧಾನಿಯಾಗಿದ್ದು,ಜನರು ಬದಲಾವಣೆ  ಬಯಸಿದ್ದರು. ಅದರಂತೆ ನರೇಂದ್ರ ಮೋದಿ ಅವರಿಗೆ ಅವಕಾಶ ಸಿಕ್ಕಿತ್ತು. ಈಗ ಅವರ ಆಡಳಿತಕ್ಕೆ ಹತ್ತು ವರ್ಷಗಳಾಗುತ್ತಿದ್ದು, ಜನರು ಬದಲಾವಣೆ ಬಯಸಿದ್ದಾರೆ. ಹೀಗಾಗಿ ಇಂಡಿಯಾ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಇದನ್ನೂ ಓದಿ:ಸಂಚಾರಿ ಸಮಸ್ಯೆ ಮುಕ್ತ ನಗರ ಗುರಿ, ಡ್ರೋಣ್ ಬಳಕೆಗೆ ಸರ್ಕಾರ ಮುಂದು:ಡಾ.ಜಿ.ಪರಮೇಶ್ವರ್

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳುತ್ತಿರುವುದು ಸುಳ್ಳು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಂದು ವಾಹಿನಿ ಮಾತ್ರ ಕಾಂಗ್ರೆಸ್‌ಗೆ 135 ಸ್ಥಾನಗಳು ಬರಲಿವೆ ಎಂದು ಹೇಳಿತ್ತು. ಆದರೆ ಉಳಿದ ವಾಹಿಸಿಗಳು ನನಗೆ 50-60 ಸ್ಥಾನಗಳು ಬರಲಿವೆ ಎಂದು ಹೇಳಿದ್ದವು. ಕೆಲವೊಮ್ಮೆ ಸಮೀಕ್ಷೆಗಳು ನಿಜವಾಗುವುದಿಲ್ಲ ಎಂಬುವುದನ್ನು ಹಿಂದಿನ ವಿಧಾನಸಭೆ ಚುನಾವಣೆ ಸಮಯದಲ್ಲೇ ನೋಡಿದ್ದೇವೆ ಎಂದರು. ಭಾರತವು ವಿಶ್ವ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ಮನಮೋಹನ್‌ ಸಿಂಗ್‌ ಅವರಂತಹವರು ಭದ್ರವಾದ ಅಡಿಪಾಯ ಹಾಕಿಕೊಟ್ಟಿದ್ದರು. ಈಗಿನವರು ಒಂದಷ್ಟು ಕೆಲಸ ಮಾಡಿದ್ದಾರೆ. ಎಲ್ಲರ ಉದ್ದೇಶ ದೇಶವನ್ನು ಬಲಪಡಿಸುವುದೇ ಆಗಿದೆ ಎಂದು ಹೇಳಿದರು.

ಅಸಮಾಧಾನಗೊಂಡಿರುವ ಶಾಸಕ ಬಿ.ಆರ್‌ಪಾಟೀಲ್‌ ರಾಜೀನಾಮೆಗೆ ಮುಂದಾಗಿದ್ದಕ್ಕೆ ಪ್ರತಿಕ್ರಿಯಿಸಿ, ಯಾರೂ ಕ್ಷೆಮೆ ಕೇಳಬೇಕಾಗಿಲ್ಲ. ಕ್ಷೆಮೆ ಕೇಳುವಂತೆ ಯಾರು ಹೇಳಿಲ್ಲ. ಬೇರೆ ಉದ್ದೇಶ ಇಟ್ಟುಕೊಂಡು ಈ ರೀತಿ ಮಾಡಿಲ್ಲ ಎಂದು ಅವರೇ ಹೇಳಿದ್ದಾರೆ ಎಂದರು.

ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣ ವ್ಯವಸ್ಥೆ ಮಾಡಿದ್ದೇವೆ. ಶಕ್ತಿ ಯೋಜನೆಯನ್ನು ಆಟೊದವರನ್ನು ಉದ್ದೇಶವಾಗಿ ಇಟ್ಟುಕೊಂಡು ಮಾಡಿಲ್ಲ. ಆಟೊ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *