ದೇಶದ ಹಲವೆಡೆ ʻʻಇಂಡಿಯಾ: ದಿ ಮೋದಿ ಕ್ವಶ್ಚನ್ʼʼ ಬಿಸಿಸಿ ಸಾಕ್ಷ್ಯಚಿತ್ರ  ಪ್ರದರ್ಶನ

ಮುಂಬೈ: ಗುಜರಾತಿನಲ್ಲಿ 2002ರಲ್ಲಿ ಸಂಭವಿಸಿದ ಭೀಕರ ಹತ್ಯಾಖಾಂಡ ಆಧರಿಸಿದ ಬಿಬಿಸಿಯ ಸಾಕ್ಷ್ಯಚಿತ್ರ ʻʻಇಂಡಿಯಾ: ದಿ ಮೋದಿ ಕ್ವಶ್ಚನ್ʼʼಅನ್ನು ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ನಡೆಸಿದ ಬಳಿಕ ಈಗ ದೇಶದ ಇತರೆ ಭಾಗಗಳಲ್ಲಿಯೂ ಪ್ರದರ್ಶನಗಳನ್ನು ಏರ್ಪಿಸಲಾಗುತ್ತಿದೆ.

ಮುಂಬೈನ ಟಾಟಾ ಸಾಮಾಜಿಕ ವಿಜ್ಞಾನಗಳ ಸಂಸ್ಥೆಯ (ಟಿಐಎಸ್‍ಎಸ್)ನಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಸಿರುವುದನ್ನು ಸಾಂಕೇತಿಕವಾಗಿ ವಿರೋಧಿಸಿ ಪ್ರಗತಿಶೀಲ ವಿದ್ಯಾರ್ಥಿಗಳ ವೇದಿಕೆ (ಪಿಎಸ್‍ಎಫ್) ಪ್ರದರ್ಶನ ಆಯೋಜಿಸಿತ್ತು.

ಇದನ್ನು ಓದಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ; ಇಷ್ಟಕ್ಕೂ ಬಿಬಿಸಿ ವಿರುದ್ಧ ಕೇಂದ್ರ ಸರ್ಕಾರ ಕೆಂಡಕಾರುವುದೇಕೆ?

ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವಿಶ್ವವಿದ್ಯಾಲಯದ ಆವರಣದ ಹೊರಗೆ ಪ್ರತಿಭಟನೆ ನಡೆಸಿರುವ ಘಟನೆಯೂ ನಡೆದಿದೆ. ವಿಶ್ವವಿದ್ಯಾನಿಲಯ ಆಡಳಿತ ಮಂಡಳಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸದಂತೆ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿದೆ. ಈ ರೀತಿಯ ಪ್ರದರ್ಶನಕ್ಕೆ ಸಂಸ್ಥೆ ಅನುಮತಿ ನೀಡಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‍ಎಫ್‍ಐ) ಕಾರ್ಯಕರ್ತರು ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿದರು. ಈ ವೇಳೆ ವಿಶ್ವವಿದ್ಯಾನಿಲಯ ಆಡಳಿತವು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪ್ರದರ್ಶನಕ್ಕೆ ಅಡ್ಡಿಪಡಿಸಿತ್ತು.

ಇದೇ ರೀತಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಗಳಲ್ಲೂ ಸಾಕ್ಷ್ಯ ಚಿತ್ರ ಪ್ರದರ್ಶಸಲು ಯತ್ನಿಸಿರುವ ಘಟನೆಗಳು ನಡೆದಿದೆ. ಹೈದರಾಬಾದ್ ವಿಶ್ವವಿದ್ಯಾನಿಲಯ, ಕೋಲ್ಕತ್ತಾದ ಜಾದವ್‍ಪುರ ವಿಶ್ವವಿದ್ಯಾಲಯ, ಪ್ರೆಸಿಡೆನ್ಸಿ ಯುನಿವರ್ಸಿಟಿ ಸೇರಿದಂತೆ ಇತರ ಸಂಸ್ಥೆಗಳು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *