ಹೊಸದಿಲ್ಲಿ: ಭಾರತವು ಶುಕ್ರವಾರ ತನ್ನ 75 ನೇ ಗಣರಾಜ್ಯೋತ್ಸವವನ್ನು ತನ್ನ ಮಹಿಳಾ ಶಕ್ತಿ ಮತ್ತು ಮಿಲಿಟರಿ ಶಕ್ತಿಯ ಭವ್ಯ ಪ್ರದರ್ಶನದೊಂದಿಗೆ ಆಚರಿಸಿತು. ರಾಷ್ಟ್ರ ರಾಜಧಾನಿಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರ ಸಮ್ಮುಖದಲ್ಲಿ ಸೇನೆಯ ಕವಾಯತುಗಳು, ಕ್ಷಿಪಣಿಗಳು, ಯುದ್ಧ ವಿಮಾನಗಳು, ಕಣ್ಗಾವಲು ಗ್ಯಾಜೆಟ್‌ಗಳು ಮತ್ತು ಮಾರಣಾಂತಿಕ ಶಸ್ತ್ರಾಸ್ತ್ರ ವ್ಯವಸ್ಥೆಗಳ ಪರೇಡ್ ನಡೆಯುತು.
ಇದೇ ಮೊದಲ ಬಾರಿಗೆ ಎಲ್ಲಾ ಮಹಿಳಾ ತ್ರಿ-ಸೇವಾ ತುಕಡಿಯು ಕರ್ತವ್ಯ ಪಥದಲ್ಲಿ ಪರೇಡ್ ನಡೆಸಿತು. ಅಲ್ಲದೆ, ಇದೆ ಮೊದಲ ಬಾರಿಗೆ 100 ಕ್ಕೂ ಹೆಚ್ಚು ಮಹಿಳಾ ಕಲಾವಿದರು ಸಾಂಪ್ರದಾಯಿಕ ಮಿಲಿಟರಿ ಬ್ಯಾಂಡ್‌ಗಳ ಬದಲಿಗೆ ಸಂಗೀತ ವಾದ್ಯಗಳಾದ ಶಂಖ, ನಾದಸ್ವರಂ ಮತ್ತು ನಾಗದವನ್ನು ನುಡಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮ್ಯಾಕ್ರನ್ ಅವರು ಕರ್ತವ್ಯ ಪಥಕ್ಕೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು.
ಇದನ್ನೂ ಓದಿ: ಆನಂದ್ ತೇಲ್ತುಂಬ್ಡೆ, ಡಾ. ಮಹದೇವಪ್ಪ, ನಾ. ಡಿಸೋಜ, ಮೀನಾಕ್ಷಿ ಬಾಳಿ ಸೇರಿ 75 ಗಣ್ಯರಿಗೆ ವಿವಿಧ ಪ್ರಶಸ್ತಿ ಪ್ರಕಟ
ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇತರ ಹಲವಾರು ಕೇಂದ್ರ ಸಚಿವರು, ದೇಶದ ಉನ್ನತ ಸೇನಾ ಅಧಿಕಾರಿಗಳು, ವಿದೇಶಿ ರಾಜತಾಂತ್ರಿಕರು ಮತ್ತು ಹಿರಿಯ ಅಧಿಕಾರಿಗಳು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ನಡೆದ ಈ ಸಮಾರಂಭದಲ್ಲಿ ಭಾಗಿಯಾದರು.
Here are glimpses from our vibrant Republic Day celebrations: a spectacular parade showcasing India’s strength and diversity. pic.twitter.com/iu9tCZ4gma
— Narendra Modi (@narendramodi) January 26, 2024
ಪ್ರಧಾನಮಂತ್ರಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವುದರೊಂದಿಗೆ ಸಮಾರಂಭವು ಪ್ರಾರಂಭವಾಯಿತು, ಅಲ್ಲಿ ಅವರು ಹಾರ ಹಾಕು ಮೂಲಕ ಮಡಿದ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸುವ ಗೌರವಿಸಿದರು. ಇದಾಗಿ ಕೆಲವು ನಿಮಿಷಗಳ ನಂತರ, ಅಧ್ಯಕ್ಷ ಮುರ್ಮು ಮತ್ತು ಅವರ ಫ್ರೆಂಚ್ ಕೌಂಟರ್ ಮ್ಯಾಕ್ರನ್ ಅವರು ‘ಸಾಂಪ್ರದಾಯಿಕ ಬಗ್ಗಿ’ಯಲ್ಲಿ ಸಮಾರಂಭಕ್ಕೆ ಆಗಮಿಸಿದರು.
Some more glimpses from this morning at Kartavya Path on Republic Day. pic.twitter.com/3etRiLUXMP
— Narendra Modi (@narendramodi) January 26, 2024
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 16 ಮತ್ತು ಕೇಂದ್ರ ಸಚಿವಾಲಯಗಳು ಹಾಗೂ ಇಲಾಖೆಗಳಿಂದ ಒಂಬತ್ತು ಟ್ಯಾಬ್ಲೋಗಳು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಚಲಿಸಿದವು. ಅರುಣಾಚಲ ಪ್ರದೇಶ, ಹರಿಯಾಣ, ಮಣಿಪುರ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಢ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ಲಡಾಖ್, ತಮಿಳುನಾಡು, ಗುಜರಾತ್, ಮೇಘಾಲಯ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು ತೆಲಂಗಾಣದ ಟ್ಯಾಬ್ಲೋಗಳು ಪರೇಡ್‌ನಲ್ಲಿ ಇದ್ದವು.
ಇದನ್ನೂ ಓದಿ: ಜೆಡಿಎಸ್ – ಬಿಜೆಪಿ ಸೀಟು ಮಾತುಕತೆ | ಯಾವುದೆ ಕಾರಣಕ್ಕೂ ಮಂಡ್ಯ ಬಿಟ್ಟುಕೊಡಲ್ಲ ಎಂದ ಸುಮಲತಾ
ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ 75ನೇ ಗಣರಾಜ್ಯೋತ್ಸವ ಸಂಭ್ರಮನ್ನು ರಾಜ್ಯ ರಾಜಧಾನಿಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸುವುದರ ಮೂಲಕ ನಡೆಸಿದರು. ಧ್ವಜಾರೋಹಣದ ನಂತರ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರಿಸಿದರು.
ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, “ಈ ಐತಿಹಾಸಿಕ ದಿನದಂದು ಭಾರತದ ಸಂವಿಧಾನವು ಜಾರಿಗೆ ಬಂದಿತು. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧೈಯವನ್ನು ಹೊಂದಿದೆ. ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ನನ್ನ ಸರ್ಕಾರ ಶ್ರಮಿಸುತ್ತಿದೆ” ಎಂದು ಹೇಳಿದರು.
“ನನ್ನ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ಎಲ್ಲಾ ಐದು ಗ್ಯಾರಂಟಿಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಅನುಷ್ಠಾನಗೊಳಿಸಿರುತ್ತೇವೆ ಎಂದು ಹರ್ಷಿಸುತ್ತೇನೆ” ಎಂದು ತಿಳಿಸಿದರು. ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವಿಡಿಯೊ ನೋಡಿ: #ಮಂಗಳೂರು – ರಾಷ್ಟ್ರ ಧ್ವಜ ಹಾರಿಸುವ ಅಶೋಕ ಸ್ಥಂಬದಲ್ಲಿ #ಆರೆಸ್ಸೆಸ್ ಬಾವುಟ ಹಾರಿಸಿದ ಕಿಡಿಗೇಡಿಗಳು