ನವದೆಹಲಿ: ಭಾರತದಲ್ಲಿ ಕೊರೊನಾ ಅಬ್ಬರ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಯ ಅಂತಿಮ ವರದಿಯಂತೆ ಕಳೆದ 24 ತಾಸಿನಲ್ಲಿ 18,833 ಹೊಸ ಪ್ರಕರಣಗಳು ದಾಖಲಾಗಿದ್ದು, 278 ಮಂದಿ ನಿಧನರಾಗಿರುವುದು ವರದಿಯಾಗಿದೆ. ಹೊಸ ಪ್ರಕರಣಗಳ ದಾಖಲಾತಿ ಕಳೆದ 203 ದಿನಗಳ ಕನಿಷ್ಠ ಸಂಖ್ಯೆಯಾಗಿದೆ.
ದೇಶದ ಬಹುತೇಕ ಕಡೆಗಳಲ್ಲಿ ಶಾಲೆಗಳನ್ನು ಇನ್ನೂ ಆರಂಭವಾಗಿಲ್ಲ. ರೈಲುಗಳು ಸಹ ಪೂರ್ಣ ಪ್ರಮಾಣದಲ್ಲಿ ಸಂಚಾರ ನಡೆಸುತ್ತಿಲ್ಲ. ಭಾರತದಲ್ಲಿ ಕೋವಿಡ್ ಎರಡನೇ ಅಲೆ ಪ್ರಭಾವ ಕಡಿಮೆಯಾಗುತ್ತಿದ್ದು, ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿದೆ. ಈಗಾಗಲೇ ಹಲವು ರಾಜ್ಯಗಳು ಘೋಷಣೆ ಮಾಡಿದ್ದ ಲಾಕ್‌ಡೌನ್ ಸಡಿಲಗೊಳಿಸುತ್ತಿವೆ.
ಇದನ್ನು ಓದಿ: ಕೋವಿಡ್ ಸೋಂಕು: ವೈದ್ಯಕೀಯ ಸೌಲಭ್ಯ ಹೆಚ್ಚಳ ಹಾಗೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ
ಇದುವರೆಗೆ ದೇಶದಲ್ಲಿ ದಾಖಲಾದ ಒಟ್ಟು ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿಕೆಯಾಗಿದೆ. ನಿಧನರಾದವರ ಸಂಖ್ಯೆ 4,49,538ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902 ಇದೆ.
ಕಳೆದ 24 ಗಂಟೆಗಳಲ್ಲಿ 24,770 ಮಂದಿ ಗುಣಮುಖರಾಗಿದ್ದು, ಇದುವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರು 3,31,75,656 ಮಂದಿ ಎಂದು ವರದಿಯಾಗಿದೆ.
ಭಾರತದಲ್ಲಿ ಒಂದೇ 14,09,825 ಮಂದಿಯನ್ನು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಐಸಿಎಂಆರ್ ಮಾಹಿತಿ ಇದುವರೆಗೆ ಒಟ್ಟು 57,68,03,867 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಮೂಲಕ ಇಲ್ಲಿಯವರೆಗೂ ಒಟ್ಟಾರೆ 92,17,65,405 ಕೋಟಿಯಷ್ಟು ನೀಡಲಾಗಿದೆ.
ಕರ್ನಾಟಕದಲ್ಲಿ 523 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 201 ಹೊಸ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 575 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 29,78,808 ಆಗಿದ್ದು, ಗುಣಮುಖರಾದವರ ಸಂಖ್ಯೆ 29,29,008 ಇದೆ. ರಾಜ್ಯದಲ್ಲಿ ಇದುವರೆಗೆ 37,845 ಮಂದಿ ನಿಧನರಾಗಿದ್ದಾರೆ.
ಸದ್ಯ ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,926 ಇದ್ದು ಶೇ.0.59ಕ್ಕೆ ರಷ್ಟು ಇದೆ.