ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ ರೂ.500 ದಂಡ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ಎರಡನೇ ಅಲೆ ನಿಯಂತ್ರಣಕ್ಕೆ ಬಿಗಿಯಾದ ನಿಯಮಗಳನ್ನು ಜಾರಿಗೆ ತಂದಿರುವ ಭಾರತೀಯ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ರೈಲುಗಳಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ ರೂ.500 ರವರೆಗೆ ದಂಡ ವಿಧಿಸಲಿದೆ. ಮಾಸ್ಕ್ ಧರಿಸುವುದು ಕಡ್ಡಾಯದ ಬಗ್ಗೆ ಮಾಡಿರುವ ರೈಲ್ವೆ ಇಲಾಖೆ ಮುಂದಿನ ಆದೇಶದವರೆಗೆ ಸುಮಾರು 6 ತಿಂಗಳವರೆಗೆ ವಿಸ್ತರಣೆ ಮಾಡಿದೆ.

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಕೋವಿಡ್-19 ಮಾರ್ಗಸೂಚಿಗಳ ಮತ್ತೊಂದು ಸುತ್ತೋಲೆಯನ್ನು ಹೊರಡಿಸಿದೆ. ರೈಲಿನಲ್ಲಿ ಪ್ರಯಾಣಿಸುವವರು, ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಒಯ್ಯಬೇಕಾಗಿಲ್ಲ. ಆದರೆ ಕೇಂದ್ರ-ರಾಜ್ಯ ಸರ್ಕಾರಗಳು ಹೊರಡಿಸಿರುವ ಕೋವಿಡ್-19 ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ತಿಳಿಸಿದೆ.

ರೈಲ್ವೆ ನಿಲ್ದಾಣ ಹಾಗೂ ರೈಲುಗಳು ಸಂಚಾರದ ಸಂದರ್ಭದಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಬೇಯಿಸಿದ ಆಹಾರದ ಬದಲಿಗೆ ಸಿದ್ಧಪಡಿಸಿದ ಪ್ಯಾಕೇಜ್ ಮಾಡಿದ ಆಹಾರ ನೀಡಲು ತಿಳಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ವಿವಿಧ ಆರೋಗ್ಯ ಸಲಕರಣೆಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ, ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.

ರೈಲ್ವೆ ಇಲಾಖೆ ಪ್ರಸ್ತುತ ದೇಶದಲ್ಲಿ ಸರಾಸರಿ 1402 ವಿಶೇಷ ರೈಲುಗಳ ಸಂಚಾರ ಮಾಡುತ್ತಿದೆ. ಒಟ್ಟು 5 ಸಾವಿರದ 381 ಉಪ ನಗರ ರೈಲು ಸೇವೆಗಳು ಮತ್ತು 830 ಪ್ರಯಾಣಿಕ ರೈಲುಗಳು ಸಂಚರಿಸುತ್ತಿವೆ.

Donate Janashakthi Media

Leave a Reply

Your email address will not be published. Required fields are marked *