ರ್ಜೆಸ್ಜೋವ್ (ಪೋಲೆಂಡ್): ರಷ್ಯಾ ಮತ್ತು ಉಕ್ರೇನ್ ನಡುವಿನ ಕದನದಲ್ಲಿ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಉಕ್ರೇನ್ ರಾಜಧಾನಿ ಕೀವ್ದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಕೈವ್ ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಮೇಲೆ ಗುಂಡು ಹಾರಿಸಲಾಗಿದೆ. ತಕ್ಷಣ ಅವರನ್ನು ಕೈವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದಾರೆ.
ನೆರವಿಗೆ ಬಾರದ ಭಾರತೀಯ ರಾಯಭಾರಿ ಕಚೇರಿ : ಯುದ್ಧ ಬಾಧಿತ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳಿಂದ ಯಾವುದೇ ರೀತಿಯ ನೆರವು ಸಿಗುತ್ತಿಲ್ಲ ಎಂದು ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ವಿದ್ಯಾರ್ಥಿ ಹರ್ಜೊತ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭದ್ರತಾ ಕಾರಣದಿಂದ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ನಾವಿದ್ದ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಪರಿಣಾಮ ತಾವು ಗಾಯಗೊಂಡಿರುವುದಾಗಿ ಹರ್ಜೋತ್ ಸಿಂಗ್ ಎಂಬ ಯುವಕ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾನೆ. ಗಾಲಿಕುರ್ಚಿಯಂತಹ ಸೌಲಭ್ಯಗಳನ್ನು ಒದಗಿಸಿ ನನನ್ನು ಇಲ್ಲಿಂದ ಏರ್‌ಲಿಫ್ಟ್ ಮಾಡಿ. ಅಗತ್ಯ ದಾಖಲಾತಿಗೆ ಸಹಾಯ ಮಾಡುವಂತೆ ರಾಯಭಾರ ಕಚೇರಿಗೆ ಮನವಿ ಮಾಡಿದ್ದಾರೆ.
ಸತ್ತ ನಂತರ ವಿಮಾನ ಕಳಿಸಿದರೂ ಉಪಯೋಗವಿಲ್ಲ. ಎರಡು ಬಾರಿ ಬದುಕುಳಿದಿದ್ದೇನೆ ನಾನು ಬದುಕಬೇಕು, ವೈಧ್ಯಕೀಯ ಲೋಕದಲ್ಲಿ ಸಾಧನೆ ಮಾಡಬೇಕು ಎಂದಿದ್ದಾರೆ.