ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ: ಹರಿಪ್ರಸಾದ್‌ಗೆ ಎಂ.ಬಿ.ಪಾಟೀಲ್‌ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿ ಪರೋಕ್ಷ ವಾಗ್ದಾಳಿ ನಡೆಸಿರುವ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಸೂಕ್ಷ್ಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ಪರೋಕ್ಷ 

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಶ್ನೆಗೆ ಉತ್ತರಿಸಿದ ಅವರು, ಹರಿಪ್ರಸಾದ್‌ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ  ಆಗಿದ್ದವರು. ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿದವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ₹8,000 ಕೋಟಿಯ ಬ್ಯಾಟರಿ ಉತ್ಪಾದನಾ ಘಟಕ ಸ್ಪಾಪಿಸಲಿರುವ ಐಬಿಸಿ:ಸಚಿವ ಎಂ.ಬಿ.ಪಾಟೀಲ  

ಹರಿಪ್ರಸಾದ್‌ ಅವರಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ್‌ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್‌ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ, ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಪರೋಕ್ಷ

Donate Janashakthi Media

Leave a Reply

Your email address will not be published. Required fields are marked *