ಬೆಂಗಳೂರು ಫೆ 18 : ಕೇಂದ್ರದ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು (ಗುರುವಾರ) ದೇಶಾದ್ಯಂತ ರೈಲು ತಡೆ ಚಳವಳಿ ನಡೆಯಲಿದ್ದು, ಕರ್ನಾಟಕದಲ್ಲೂ ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ರೈಲು ತಡೆಯುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಮುಂದಾಗಿವೆ.
ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ದೆಹಲಿ ರೈತ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ರೈತ ಚಳುವಳಿಯ ಹತ್ತಿಕ್ಕುವ ಪ್ರಯತ್ನಕೆ ಹೆಚ್ಚು ಒತ್ತು ನೀಡುತ್ತಿದೆ, ನಾಟಕೀಯವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ತನಕ ರೈಲು ತಡೆ ಚಳವಳಿ ನಡೆಸಲು ದೇಶವ್ಯಾಪಿ ಕರೆ ನೀಡಲಾಗಿದೆ.
ಇದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ
ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಈ ಹೋರಾಟವನ್ನು ಯಶಸ್ವಿಗೊಳಿಸಲು ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ವಿದ್ಯಾರ್ಥಿ ಯುವಜನರಲ್ಲಿ ಸಂಯುಕ್ತ ಕರ್ನಾಟಕದ ಮುಖಂಡರು ಮನವಿ ಮಾಡಿದ್ದಾರೆ.