ಮನೋರಂಜನ್ ಎಸ್‌ಎಫ್‌ಐ ಕಾರ್ಯಕರ್ತನಲ್ಲ| ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ದ ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರು : ನೂತನ ಸಂಸತ್ತು ಭವನದಲ್ಲಿ ವೀಕ್ಷಕರ ಗ್ಯಾಲರಿಯಿಂದ ಸಭಾಂಗಣಕ್ಕೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಆತಂಕ ಸೃಷ್ಟಿಸಿದ ಆಗಂತುಕ ಮನೋರಂಜನ್ ಎಸ್‌ಎಫ್‌ಐ ಕಾರ್ಯಕರ್ತ ಎಂದು ಸುಳ್ಳು ಸುದ್ದಿ ಹಂಚಲಾಗುತ್ತಿದೆ. ಅಂತವರ ವಿರುದ್ದ ಪ್ರಕರಣ ದಾಖಲಿಸುತ್ತಿದ್ದೇವೆ ಎಂದು ಎಸ್‌ಎಫ್‌ಐ (SFI) ಕರ್ನಾಟಕ ರಾಜ್ಯ ಸಮಿತಿ ತಿಳಿಸಿದೆ. ಮನೋರಂಜನ್

ಈ ಕುರಿತು ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ್‌ ಕಡಗದ್‌, ರಾಜ್ಯ ಕಾರ್ಯದರ್ಶಿ ಭೀಮನಗೌಡ ಜಂಟಿ ಹೇಳಿಕೆ ನೀಡಿದ್ದುಈ ಕೃತ್ಯ ಎಸಗಿದವರನ್ನು ಈಗಾಗಲೇ ಬಂಧಿಸಿಲಾಗಿದೆ ಅವರನ್ನು ಸೂಕ್ತ ವಿಚಾರಣೆ ಒಳಪಡಿಸಿ ಕಾನೂನಿನ ಕ್ರಮಕ್ಕೆ ಮುಂದಾಗಬೇಕು. ಕೃತ್ಯ ಎಸಗಿದವರ ಪೈಕಿ ಇಬ್ಬರೂ ಕರ್ನಾಟಕ, ಒಬ್ಬರು ಹರಿಯಾಣ ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇವರೆಲ್ಲ ಲೋಕಸಭೆ ಪ್ರವೇಶ ಮಾಡಲು ಕುಮ್ಮಕ್ಕು ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ? ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಮನೋರಂಜನ್

ಇದನ್ನೂ ಓದಿಲೋಕಸಭೆಗೆ ಪ್ರವೇಶಿಸಿ ಅಶ್ರುವಾಯು ಎಸೆದ ಅಪರಿಚಿತರು; ಮೈಸೂರು ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ಪಡೆದಿದ್ದ ಆರೋಪಿಗಳು  ಮನೋರಂಜನ್

ಎಸ್‌ಎಫ್ಐ ಸಂಘಟನೆ ತ್ಯಾಗ ಬದ್ದತೆಯ ಮೂಲಕ ವಿದ್ಯಾರ್ಥಿಗಳ, ಶಿಕ್ಷಣದ ಮತ್ತು ಸಮಾಜದ ಪ್ರಗತಿಗಾಗಿ ಹಾಗೂ ಸೌಹಾರ್ದ, ಸಾಮರಸ್ಯದ ಘನತೆಯ ಬದುಕಿಗಾಗಿ ಐದು ದಶಕಗಳಿಂದ ವಿದ್ಯಾರ್ಥಿ ಸಮುದಾಯದ ಪರವಾಗಿ ದೇಶಾದ್ಯಂತ ಹೋರಾಟ ಮಾಡುತ್ತಾ ಬರುತ್ತಿದೆ. ಇದನ್ನು ಸಹಿಸದ ಈ ದೇಶದ ಕೋಮುವಾದಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸೈದ್ದಾಂತಿಕವಾಗಿ ಸಂಘಟನೆಯನ್ನು ಎದುರಿಸಲಾಗದೆ ಈ ಪ್ರಕರಣದಲ್ಲಿ ‌ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷರಾದ‌ ವಿಜಯ್ ಕುಮಾರ್ ಇವರ ಹೆಸರನ್ನು ಎಳೆದು ತಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮನೋರಂಜನ್

ಬಿಜೆಪಿಯ ಕಾರ್ಯಕರ್ತರು ಸೈದ್ಧಾಂತಿಕವಾಗಿ ಎದುರಿಸಲಾಗದೆ, ಸೋಶಿಯಲ್ ಮೀಡಿಯಾದಲ್ಲಿ ಅಪ್ರಚಾರ ಮಾಡುತ್ತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನ ಆದರೂ ದುರುದ್ದೇಶದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ.

ಹಾಗಾಗಿ ಬಿಜೆಪಿಯ ಐಟಿ ಸೆಲ್‌ಗಳು ಹಾಗೂ ಅದನ್ನು ನಿರ್ವಹಿಸುವ ಅಡ್ಮಿನ್‌ಗಳನ್ನು ಮತ್ತು ಸುಳ್ಳು ಸುದ್ದಿಯನ್ನು ಶೇರ್ ಮಾಡುತ್ತಿರುವ ಎಲ್ಲಾ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ದೂರು ಪ್ರಕರಣ ದಾಖಲಿಸಲಾಗುವುದು ಎಂದು ಎಸ್‌ಎಫ್‌ಐ ತಿಳಿಸಿದೆ.

ವಿಡಿಯೊ ನೋಡಿಲೋಕಸಭೆಗೆ ನುಗ್ಗಿದ ಇಬ್ಬರು ಅಪರಿಚಿತರು! ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದ ಆರೋಪ #ParliamentAttack  ಮನೋರಂಜನ್

 

 

Donate Janashakthi Media

Leave a Reply

Your email address will not be published. Required fields are marked *