ಬಿಬಿಎಂಪಿ ಬೆಂಕಿ ಅವಘಡ ಕುರಿತು ಎರಡು ಮೂರು ದಿನದಲ್ಲಿ ಮಾಹಿತಿ ಬಹಿರಂಗ :ಡಿ.ಕೆ.ಶಿವಕುಮಾರ್

ಬೆಂಗಳೂರು:ಕಮಿಷನ್‌ ಹೆಸರಿನಲ್ಲಿ ಸುಳ್ಳು ಆರೋಪ ಮಾಡಿ ಹೆದರಿಸಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಯಾರನ್ನೋ ಹೆದರಿಸಿದಂತೆ ನನ್ನನ್ನು ಹೆದರಿಸಲು ಆಗದು ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ:ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ : ಪ್ರತ್ಯೇಕ ತನಿಖೆಗೆ ಸಿಎಂ ಸೂಚನೆ

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕಮಿಷನ್‌ ಆರೋಪ ಎಲ್ಲಿಂದ ಬಂತು? ಕಾಮಗಾರಿಗಳ ನೈಜತೆ ಪರಿಶೀಲಿಸಿ ಬಿಲ್‌ ಪಾವತಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ತನಿಖೆಗಾಗಿ ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಬರಲಿ, ಎಲ್ಲವೂ ಗೊತ್ತಾಗುತ್ತದೆ ಎಂದರು.

ಪಕ್ಷಕ್ಕೆ ಮುಜುಗರ ಆಗುವಂತಹ ಕೆಲಸವನ್ನು ಯಾವತ್ತೂ ಮಾಡಿಲ್ಲ. ಹಾಗೆ ಮಾಡಿದ್ದರೆ ನಾನು ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿಯವರು ಅಲ್ಲಿಗೆ ಬಂದು ನನ್ನನ್ನು ವಿಚಾರಿಸುತ್ತಿರಲಿಲ್ಲ ಎಂದು ಹೇಳಿದರು.

ನಾನು ಎಷ್ಟು ತೆರಿಗೆ ಪಾವತಿಸುತ್ತೇನೆ? ಎಷ್ಟು ಆಸ್ತಿ ಹೊಂದಿದ್ದೇನೆ? ಎಂಬುವುದನ್ನು ಪ್ರಾಮಾಣಿಕವಾಗಿ ಘೋಷಿಸಿದ್ದೇನೆ ಎಂದರು. ಬಿಬಿಎಂಪಿ ಕಚೇರಿಯಲ್ಲಿ ನಡೆದ ಬೆಂಕಿ ಅವಘಡ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *