ಮೈಸೂರು: ಆತಂರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎಂಬ ಕಾರಣ ನೀಡಿ ಕ್ಯಾಂಪಸ್ ಆಯ್ಕೆ(ಕ್ಯಾಂಪಸ್ ಸೆಲೆಕ್ಷನ್) ಮೂಲಕ ಕೆಲಸ ಗಿಟ್ಟಿಸಿಕೊಂಡಿದ್ದ ಸುಮಾರು 300ಕ್ಕೂ ಹೆಚ್ಚು ಯುವ ಇನ್ಫೋಸಿಸ್ ಉದ್ಯೋಗಿಗಳನ್ನು ತೆಗೆದುಹಾಕಿರುವುದರ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ.
ಸಂಘಟನೆಯ ದೂರಿನಲ್ಲಿ ಏನಿದೆ?
ಬಾಧಿತ ಉದ್ಯೋಗಿಗಳಿಂದ ‘ಇನ್ಫೋಸಿಸ್, ಇತ್ತೀಚೆಗೆ ಕ್ಯಾಂಪಸ್‌ನಲ್ಲಿ ಆಯ್ಕೆ ಮಾಡಿಕೊಂಡವರನ್ನು ಬಲವಂತವಾಗಿ ವಜಾಗೊಳಿಸುವ ಕ್ರಮಕ್ಕೆ ಮುಂದಾಗಿದೆ’ ಎಂದು ದೂರು ಬಂದಿದೆ. ಕಂಪನಿಯು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಬೌನ್ಸರ್‌ಗಳು ಮತ್ತು ಭದ್ರತಾ ಸಿಬ್ಬಂದಿಗಳ ಮೂಲಕ ಬೆದರಿಕೆ ಹಾಕಿದೆ. ವಜಾ ಮಾಡಿದ ವಿದ್ಯಾರ್ಥಿಗಳಿಗೆ ಮುಂಚೆಯೇ ಯಾವುದೇ ಸೂಚನೆ ನೀಡಿಲ್ಲ.
ಇದು ಅವರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದಿದೆ. ಅಲ್ಲದೇ ಕೈಗಾರಿಕಾ ವಿವಾದ ಕಾಯ್ದೆ ನಿಬಂಧನೆ ಉಲ್ಲಂಘಿಸಿದಕ್ಕಾಗಿ ಇನ್ಫೋಸಿಸ್ ವಿರುದ್ಧ ಕ್ರಮ ಹಾಗೂ ವಜಾ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದೆ.
ಇದನ್ನೂ ಓದಿ: ಹೆರಿಗೆ ಮಾಡಲು ತಡ ಮಾಡಿದಕ್ಕೆ ಶಿಶು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ
ಇನ್ಫೋಸಿಸ್ ಲಿಮಿಟೆಡ್ ಇತ್ತೀಚೆಗೆ ಕ್ಯಾಂಪಸ್ ನೇಮಕಾತಿ ಮಾಡಿಕೊಂಡವರನ್ನು ಬಲವಂತವಾಗಿ ವಜಾಗೊಳಿಸುವ ಕ್ರಮಕ್ಕೆ ಮುಂದಾಗಿದೆ ಎಂದು ಬಾಧಿತ ಉದ್ಯೋಗಿಗಳಿಂದ ಬಂದ ಹಲವಾರು ದೂರುಗಳ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಅವರಿಗೆ ಆಫರ್ ಲೆಟರ್‌ಗಳನ್ನು ನೀಡಿದ ನಂತರವೂ ಎರಡು ವರ್ಷಗಳ ಕಾಲ ವಿಳಂಬವಾಗಿತ್ತು” ಎಂದು ನೈಟ್ಸ್‌ನ ವಕೀಲ ಮತ್ತು ಅಧ್ಯಕ್ಷ ಹರ್‌ಪ್ರೀತ್ ಸಿಂಗ್ ಸಲೂಜಾ ಶನಿವಾರ ಭಾರತದ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಬರೆದ ಲಿಖಿತ ಪತ್ರದಲ್ಲಿ ತಿಳಿಸಿದ್ದಾರೆ.
ಆದರೆ ಇನ್ಫೋಸಿಸ್ ತನ್ನ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿ ನಂತರವೂ ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕೆ ಹೊಸದಾಗಿ ನೇಮಕಗೊಂಡ 300 ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಆರೋಪಕ್ಕೆ ಇನ್ಫಿ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದೆ.
ಈ ಬಗ್ಗೆ ಇನ್ಫೋಸಿಸ್ ಪ್ರತಿಕ್ರಿಯಿಸಿದ್ದು, ‘ನಾವು ಕಠಿಣ ನೇಮಕಾತಿ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಹೊಸದಾಗಿ ನೇಮಕಗೊಂಡವರು ನಮ್ಮ ಮೈಸೂರು ಕ್ಯಾಂಪಸ್‌ನಲ್ಲಿ ತರಬೇತಿಯನ್ನು ಪಡೆದ ಬಳಿಕವೂ ಮೂರು ಅವಕಾಶ ನೀಡಿದರೂ ಆಂತರಿಕ ಮೌಲ್ಯಮಾಪನವನ್ನು ಪೂರ್ಣಗೊಳಿಸಲು ವಿಫಲರಾಗಿದ್ದಾರೆ. ಹೀಗಾಗಿ ಅವರು ಸಂಸ್ಥೆಯೊಂದಿಗೆ ಮುಂದುವರೆಯಲು ಸಾಧ್ಯವಿಲ್ಲ. ಈ ಷರತ್ತನ್ನು ಅವರ ಒಪ್ಪಂದದಲ್ಲಿಯೂ ಉಲ್ಲೇಖಿಸಲಾಗಿದೆ’ ಎಂದಿದೆ.
ಇನ್ಫೋಸಿಸ್ ಮೈಸೂರು ಸೇರಿ ಇನ್ಫೋಸಿಸ್‌ನ ಸುಮಾರು 700 ಕ್ಯಾಂಪಸ್ ನೇಮಕಾತಿಗಳನ್ನು ವಜಾಗೊಳಿಸಿದೆ ಎಂದು ಹೇಳಲಾಗುತ್ತಿದೆ. 2024 ಅಕ್ಟೋಬರ್ ತಿಂಗಳಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಆಯ್ಕೆಯಾದ ಹೊಸ ಐಟಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ಪ್ರಯತ್ನಿಸಿದೆ. ಇದರ ಭಾಗವಾಗಿ ಉದ್ಯೋಗಿಗಳನ್ನು ಗೌಪ್ಯತಾ ಒಪ್ಪಂದಕ್ಕೆ ಸಹಿ ಹಾಕುವಂತೆ ಬೆದರಿಕೆ ಹಾಕುತ್ತಿದೆ ಐಟಿ ಉದ್ಯೋಗಿಗಳ ಸಂಘಟನೆ ಆರೋಪಿಸಿದೆ.
ಇದನ್ನೂ ನೋಡಿ: ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ರೈತ ಕೂಲಿಕಾರರ ಪ್ರತಿಭಟನೆ Janashakthi Media