ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಂದು ಪತ್ರ ಬರೆದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಂಧನ ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ಪತ್ರ ಆಧರಿಸಿ ವಿದೇಶಾಂಗ ಇಲಾಖೆಯು ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆಯನ್ನು ಶುರು ಮಾಡಿದೆ. ಕಾರಣ, ಈಗಾಗಲೇ ಅರೆಸ್ಟ್ ವಾರೆಂಟ್, ಸಮೇತ ಪತ್ರ ಎಸ್‌ಐಟಿ ಬರೆದಿದೆ.
ಭಾರತೀಯ ವಿದೇಶಾಂಗ ಇಲಾಖೆಗೆ ಎಸ್‌ಐಟಿ ಅಧಿಕಾರಿಗಳು ರಾಜ್ಯ ಗೃಹ ಇಲಾಖೆ ಮುಖಾಂತರ ಪತ್ರ ರವಾನಿಸಿದ್ದಾರೆ. ಈ ಹಿಂದೆ ಸಿಎಂ ಪತ್ರ ಬರೆದಿದ್ದ ವೇಳೆ ನ್ಯಾಯಾಲಯದ ಆದೇಶ ಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ಹಾಗಾಗಿ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಪಡೆದು ಎಸ್‌ಐಟಿಯವರು ಪುನಃ ಪತ್ರ ಬರೆದಿದ್ದಾರೆ. ಹೀಗಾಗಿ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ರದ್ದು ಪ್ರಕ್ರಿಯೆಯನ್ನು ಆರಂಭ ಮಾಡಿದೆ.
ಇದನ್ನು ಓದಿ : ಕಳಪೆ ಗುಣಮಟ್ಟದ ಕಲ್ಲಿದ್ದಲು ಮಾರಾಟ ವಂಚನೆ ಮಾಡಿ ಲಾಭ ಮಾಡಿಕೊಂಡ ಅದಾನಿ: ತನಿಖಾ ವರದಿಯಲ್ಲಿ ಬಹಿರಂಗ
ಪಾಸ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ವಿದೇಶಾಂಗ ಇಲಾಖೆ ಅಡಿಯಲ್ಲಿ ಬರುತ್ತದೆ. ಎಸ್‌ಐಟಿಯಿಂದ ಬಂದಿರುವ ಪತ್ರವನ್ನು ದೃಢೀಕರಣಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡುತ್ತದೆ. ಕೇಂದ್ರ ಗೃಹ ಇಲಾಖೆ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರೆ ಭಾರತೀಯ ವಿದೇಶಾಂಗ ಇಲಾಖೆಯು ಪಾಸ್‌ಪೋರ್ಟ್ ಅನ್ನು ರದ್ದು ಮಾಡುತ್ತದೆ.
ಒಮ್ಮೆ ಪಾಸ್‌ಪೋರ್ಟ್ ರದ್ದಾದರೆ ಈ ಬಗ್ಗೆ ಎಲ್ಲ ದೇಶಗಳ ಇಮಿಗ್ರೇಷನ್‌ಗೂ ಮಾಹಿತಿಯನ್ನು ರವಾನೆ ಮಾಡಲಾಗುತ್ತದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇಲ್ಲವೇ ಐಡೆಂಟಿಟಿ ಬದಲಾಯಿಸಿ ತಲೆಮರೆಸಿಕೊಂಡು ಓಡಾಡಬೇಕು. ಹೀಗಾಗಿ ಪ್ರಜ್ವಲ್ ರೇವಣ್ಣ ಭಾರತಕ್ಕೆ ಶೀಘ್ರದಲ್ಲೇ ಬರಲಿದ್ದಾರೆ.
ಒಂದು ವೇಳೆ ಪಾಸ್‌ಪೋರ್ಟ್ ರದ್ದು ಮಾಡಿದರೆ, ಎರಡು ವಿಧಾನಗಳಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಬಹುದು. ಯಾವ ದೇಶದಲ್ಲಿದ್ದಾರೋ ಅಲ್ಲಿ ಅವರನ್ನು ಹಸ್ತಾಂತರ ಪ್ರಕ್ರಿಯೆ (Extradition) ಅಡಿ ವಾಪಸ್ ಕರೆತರಬಹುದಾಗಿದೆ. ಆದರೆ, ಆ ದೇಶದ ನಡುವೆ ಭಾರತವು ಈ ಮೊದಲು ಒಪ್ಪಂದ ಮಾಡಿಕೊಂಡಿರಬೇಕು. ಇಲ್ಲವಾದಲ್ಲಿ, ಗಡಿಪಾರು ಪ್ರಕ್ರಿಯೆ (Deportation) ಮೂಲಕವೂ ಅವರನ್ನು ಕರೆತರಬಹುದು.
ಇದನ್ನು ನೋಡಿ : ಮಂಗಳ ಸೂತ್ರ ಮತ್ತು ಮತ ರಾಜಕಾರಣ – ಡಾ. ಮೀನಾಕ್ಷಿ ಬಾಳಿ, ಕೆಎಸ್ ವಿಮಲಾ ಮಾತುಕತೆ Janashakthi Media