ಧಾರವಾಡ : ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯಕ್ಕಾಗಿ, ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 4.500 ರೂ ಏರಿಕೆಗಾಗಿ, ಖಾಲಿ ಇರುವ ವಸತಿ ಶಾಲಾ-ಕಾಲೇಜ್ ಪ್ರಾಂಶುಪಾಲ, ವಾರ್ಡ್‌ನ, ಸಿಬ್ಬಂದಿ ನೇಮಕಾತಿ ಭರ್ತಿಗಾಗಿ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಧಾರವಾಡ ಜಿಲ್ಲಾ ಸಂಘಟನಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕೆಸಿಡಿ ಕ್ಯಾಂಪಸ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಮೆರವಣಿಗೆ ಮೂಲಕ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಬಿಸಿಎಮ್, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಎಸ್ಟಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಧಾರವಾಡ
ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ವಿದ್ಯಾರ್ಥಿಗಳು ದೂರದ ಜಿಲ್ಲೆ, ತಾಲ್ಲೂಕು, ಊರಿನಿಂದ ವಿದ್ಯಾಕಾಶಿಯೆಂದೆ ಹೆಸರು ಪಡೆದ ಧಾರವಾಡ ನಗರಕ್ಕೆ ಬಂದು ವಸತಿ ನಿಲಯದಲ್ಲಿ ಆಶ್ರಯ ಪಡೆದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ದುರಂತವೆಂದರೆ ವಿದ್ಯಾರ್ಥಿಗಳು ತಮ್ಮ ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯಗೊಂಡಿದೆ. ವಸತಿ ನಿಲಯದಲ್ಲಿ ಊಟದ ಸಮಸ್ಯೆ ವಿಪರೀತವಾಗಿದ್ದು, ಸರಿಯಲ್ಲ ಹೀಗಾಗಲೆ ಅನಾರೋಗ್ಯ ದಿಂದ ಜನರ ಬಳಲುತ್ತಿರುವ ಸೂಕ್ಷ್ಮತೆಯ ವಾತಾವರಣದಲ್ಲಿ ಈ ರೀತಿಯ ಸಮಸ್ಯೆಗಳನ್ನು ಸಹಿಸಲು ಅಸಾಧ್ಯ ಎಂದು ಆರೋಪಿಸಿದರು.
ಇದನ್ನೂ ಓದಿ : ರಾಮನಗರ| ಮಕ್ಕಳಿಗೆ ಸೇರಬೇಕಿದ್ದ ಆಹಾರ ಮಣ್ಣುಪಾಲು ; ಮಣ್ಣಿನಲ್ಲಿ ಗೋದಿ ಮೂಟೆ ಮುಚ್ಚಿದ ವಾರ್ಡನ್
ಗುಣಮಟ್ಟದ ಆಹಾರ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಹೇಳಿದರೂ ಕೂಡಾ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ” ಕೆಲವೊಮ್ಮೆ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ. ಶಿಕ್ಷಣದ ಕನಸು ಹೊತ್ತು ಬಂದ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಸಿಗದೆ, ಕಾಲೇಜಿಗೆ ತೆರಳುವ ವಾತಾವರಣ ನಿರ್ಮಾಣ ಮಾಡಲಾಗಿದೆ.” ಊಟದ ಸಮಸ್ಯೆಯಿಂದ ಬೇಸತ್ತು ಹೋಗಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಸ್ವಂತ ಕಟ್ಟಡವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೀವ್ರ ತರನಾದ ಅಡಚಣೆಯುಂಟಾಗಿದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಗಳು ಕೂಡಲೇ ಸ್ವತಃ ಕಟ್ಟಡ ನಿರ್ಮಾಣ ಮಾಡಲು ಮುಂದಾಗಬೇಕು ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಅನೇಕ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೇಮಕಾತಿಗಳು ವಿಳಂಬದ ಕಾರಣದಿಂದಾಗಿ ನಿಲಯ ಪಾಲಕರ, ಸ್ವಚ್ಚತಾ ಸಿಬ್ಬಂದಿ ಕೊರತೆ ಹೆಚ್ಚಿದೆ. ಟೆಂಡರ್ ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಜೈಲಿನಲ್ಲಿರುವ ಕೈದಿಗಳಿಗಿಂತ ಕಡೆಯಾಗಿ ಕಾಣಲಾಗುತ್ತದೆ. ರಾಜ್ಯ ಸರ್ಕಾರಕ್ಕೆ ಸಮಾಜ ಕಲ್ಯಾಣ ಇಲಾಖೆ 14 ಕೋಟಿ ಹಣ ಕೇಳಿದೆ ಆದರೆ ಸರ್ಕಾರ ನೀಡುತ್ತಿಲ್ಲ. ಅದಕ್ಕಾಗಿ ಎಸ್ಎಫ್ಐ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ. ಮೆಟ್ರಿಕ್ ವಿದ್ಯಾರ್ಥಿಗಳಿಗೆ 1750 ರೂ ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ 1850 ರೂ ಆಹಾರ ಭತ್ಯೆಯನ್ನು ನೀಡಲಾಗುತ್ತಿದೆ. ಇದರಿಂದ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ 4.500ರೂ ಆಹಾರ ಭತ್ಯಯನ್ನು ಹೆಚ್ಚಿಸಬೇಕು. ‘ಸರ್ಕಾರಿ ಶಾಲೆ, ಕಾಲೇಜು ಸೇರಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನಲ್ಲಿ 18.910 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಸತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಪ್ರತಿ ವರ್ಷ ವಿದ್ಯಾರ್ಥಿನಿಲಯಗಳ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಧಾರವಾಡ ಜಿಲ್ಲೆಗೆ ಇನ್ನೂ ಹೆಚ್ಚುವರಿಯಾಗಿ ಒಟ್ಟು 46ಕ್ಕೂ ಅಧಿಕ ಮೆಟ್ರಿಕ್ ನಂತರದ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ನಾಗರಾಜ ಛಲವಾದಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸರಿಯಾದ ಭದ್ರತೆ ಇಲ್ಲ, ಆರೋಗ್ಯ ಪರೀಕ್ಷೆ ನಡೆಯುತ್ತಿಲ್ಲ, ಅಷ್ಟಲ್ಲದೆ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಪ್ರಶ್ನಿಸಿದರೆ ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ವಸತಿ ನಿಲಯವನ್ನು ಬಿಡುವಂತಾಗಿದೆ. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯವನ್ನು ಕಲ್ಪಿಸಬೇಕು, ಆದರೆ ಹಾವೇರಿ, ಧಾರವಾಡ ಹುಬ್ಬಳ್ಳಿ, ಬೆಂಗಳೂರಿನಂತಹ ನಗರಗಳಲ್ಲಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡಲಾಗುತ್ತದೆ. ಇದನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಪ್ರಾರಂಭದ ಹಂತದಲ್ಲಿರುವ 120 ಹಾಸ್ಟೆಲ್ ಗಳನ್ನು ಕೂಡಲೇ ತೆರೆಯಬೇಕು. ಈ ಶೈಕ್ಷಣಿಕ ಸಾಲಿನಲ್ಲಿ 10 ಹಾಸ್ಟೆಲ್ ಗಳನ್ನು ಕೂಡಲೆ ತೆರೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಸ್ಎಫ್ಐ ಒತ್ತಾಯಿಸುತ್ತದೆ ಎಂದರು.
ವಿದ್ಯಾರ್ಥಿನಿ ಸಂಗೀತಾ ಮಾತನಾಡಿ, ಹಾಸ್ಟೆಲ್ ನಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ ಅರೇ ಬೆಂದ ಅನ್ನ, ರುಚಿಕರವಿಲ್ಲದ ಸಾಂಬಾರ, ಟಿಫಿನ್ ನೀಡುತ್ತಾರೆ, ಗ್ರಂಥಾಲಯ ಇಲ್ಲ ಕನಿಷ್ಠ ಪಕ್ಷ ಪುಸ್ತಕಗಳನ್ನು ಕೊಡಿಸಿಲ್ಲ, ಆಟದ ಸಾಮಗ್ರಿಗಳನ್ನು ಎರಡು ವರ್ಷಕೊಮ್ಮೆ ಕೊಡಿಸಬೇಕು ಆದರೆ ಇಲ್ಲಿಯವರೆಗೆ ಯಾವುದೇ ವಸ್ತುಗಳನ್ನು ಕೊಡಿಸಿಲ್ಲ ವಾರ್ಡನ್ ಗಳಿಗೆ ತಿಳಿಸಿದಾಗ ಸರಿ ಮಾಡುತ್ತೇನೆ ಎಂದು ಹೇಳುವ ಗುರುಗಳು ಓದುವ ಕಡೆ ಹೆಚ್ಚು ಗಮನ ನೀಡಿ ಎಂದು ನಮಗೆ ಉತ್ತಮ ಮಾರ್ಗದರ್ಶನ ಮಾಡುತ್ತಾರೆ ವಿದ್ಯಾರ್ಥಿಗಳೊಂದಿಗೆ ಚೆನ್ನಾಗಿ ಒಡನಾಟ ಹೊಂದಿದ್ದರು ಕೂಡ ಸೌಲಭ್ಯಗಳಿಂದ ವಂಚಿತರನಾಗಿ ಮಾಡುತ್ತಾರೆ ದೂರಿದರು.
ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಮೂಲಭೂತ ವಸ್ತುಗಳನ್ನು ಕೊಡದೇ ವಂಚನೆ ಮಾಡಿದು ಸರಿಯಲ್ಲ. ಬಾಡಿಗೆ ಕಟ್ಟಡದಲ್ಲಿದೆ ಎಂಬ ನೆಪ ಹೇಳುವ ಬದಲಿಗೆ ನೀರು, ಸೋಲಾರ್, ಬಕೆಟ್, ಜಂಬು, ಪುಸ್ತಕ, ಆಟದ ಸಾಮಗ್ರಿ, ಗುಡ್ ನೈಟ್ ಬಟ್ಟೆ ಸ್ವಚ್ಛ ಮಾಡುವ ವ್ಯವಸ್ಥೆ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.
ವಿವಿಧ ಬೇಡಿಕೆಗಳೊಂದಗೆ ಮನವಿ ಸಲ್ಲಿಸಿದರು
ಶೀಘ್ರವಾಗಿ ಖಾಲಿ ಇರುವ ವಸತಿ ನಿಲಯದ ಮೇಲ್ವಿಚಾರಕರನ್ನು ನೇಮಿಸಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 4.500 ರೂಗಳಿಗೆ ಏರಿಕೆ ಮಾಡಬೇಕು. ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸಬೇಕು, ಧಾರವಾಡ ನಗರಕ್ಕೆ ಕನಿಷ್ಠ 10 ಇಡೀ ಜಿಲ್ಲೆಗೆ ಕನಿಷ್ಟ 46 ಹಾಸ್ಟೆಲ್ ಮಂಜೂರು ಮಾಡಬೇಕು, ಗ್ರಂಥಾಲಯ ಹಾಗೂ ಪುಸ್ತಕಗಳನ್ನು ಒದಗಿಸಬೇಕು, ಕಂಪ್ಯೂಟರ್ ಲ್ಯಾಬ್ ಒದಗಿಸಬೇಕು , ಉತ್ತಮ ಗುಣಮಟ್ಟದ ಆಹಾರ ನೀಡಬೇಕು, ಸ್ವಚ್ಛತೆಯನ್ನು ಕಾಪಾಡಬೇಕು, ವಿದ್ಯಾರ್ಥಿನಿಯರ ಹಾಸ್ಟೆಲ್ ಗಳಲ್ಲಿ ಸಿಸಿ ಕ್ಯಾಮರಾಗಳ ಆಳವಡಿಸಬೇಕು, ಪ್ರತಿ ಹಾಸ್ಟೆಲ್ ಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು ರಾತ್ರಿ ಕಾವಲುಗಾರರು ಸೇರಿದಂತೆ ಬಿಟ್ ಪೋಲಿಸರನ್ನು ನೇಮಿಸಿ ವಿದ್ಯಾರ್ಥಿನಿಯರು, ಮಹಿಳೆಯರು, ವಸತಿ ನಿಲಯದ ಮಹಿಳಾ ಮೇಲ್ವಿಚಾರಕಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ವಿದ್ಯಾರ್ಥಿನಿಯರ ಭದ್ರತೆಗಾಗಿ ತಡೆಗೋಡೆ(compound) ನಿರ್ಮಿಸಬೇಕು, ಪ್ರತಿ ಹಾಸ್ಟೆಲ್ ಗಳಿಗೂ ಯುಪಿಎಸ್ ಒದಗಿಸಬೇಕು, ಪ್ರತಿ ಹಾಸ್ಟೆಲ್ ಗಳಿಗೂ ಟಿವಿ ಒದಗಿಸಬೇಕು, ಬಟ್ಟೆ ತೊಳೆಯಲು ಮೇಲ್ಛಾವಣಿ ನಿರ್ಮಿಸಬೇಕು, ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು, ಪ್ರತಿ ಹಾಸ್ಟೆಲ್ ಗಳಲ್ಲಿ ಆಯುಕ್ತರ ಆದೇಶದ ಮೇನ್ಯೂ ಚಾರ್ಟ್ ಅಳವಡಿಸಬೇಕು ಹಾಗೂ ಅದರ ಪ್ರಕಾರ ಊಟ ನೀಡಬೇಕು , ಪ್ರತಿ ತಿಂಗಳು ನೀಡುತ್ತಿದ್ದ ಶುಚಿ ಸಂಭ್ರಮ ಕಿಟ್ ಸರಿಯಾಗಿ ವಿತರಣೆ ಆಗುತ್ತಿಲ್ಲ ಸ್ವಯಂ ದೂರ ದಾಖಲಿಸಿಕೊಂಡು ಕಿಟ್ ಹಗರಣ ತನಿಖೆ ಮಾಡಬೇಕು, ಪ್ರತಿ ತಿಂಗಳಿಗೆ ಸರಿಯಾಗಿ ಶುಚಿ ಸಂಭ್ರಮ ಕಿಟ್ ವಿತರಣೆ ಮಾಡಬೇಕು, ಪ್ರತಿ ಹಾಸ್ಟೆಲ್ ಗಳಲ್ಲಿ ಪ್ರಥಮ ಚಿಕಿತ್ಸೆ ಘಟಕ ಅಳವಡಿಸಬೇಕು,ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಬೇಕು ಹಾಗೂ ಪ್ರತ್ಯೇಕವಾಗಿ ಆರೋಗ್ಯ ಸೆಂಟರ್ ಪ್ರಾರಂಭ ಮಾಡಬೇಕು,ವಸತಿ ನಿಲಯಗಳಲ್ಲಿ ನಡೆಯುವ ಭ್ರಷ್ಟಾಚಾರಗಳ ಕುರಿತು ಲೋಕಾಯುಕ್ತರು ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಸ್ತು ಕ್ರಮ ಜರುಗಿಸಬೇಕು, ಉಚಿತ ವೈಫೈ ಒದಗಿಸಬೇಕು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ಈ ಎಲ್ಲಾ ಬೇಡಿಕೆ ಈಡೇರಿಕೆಗಾಗಿ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಜೊತೆಗೆ ಸಭೆ ಕರೆಯಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕ ಕಾರ್ಯದರ್ಶಿ ಶ್ರೀನಿವಾಸ ಹೆಚ್ ಮುಖಂಡರಾದ ಅರುಣ್ ನಾಗವತ್, ಚೈತ್ರ ಶಿವನಣ್ಣನವರ, ರುದ್ರೇಶ್ ನಾಯಕ್, ನರೇಂದ್ರ, ಶಿವುಕುಮಾರ್ ನಾಯಕ್, ಹನುಮಂತಪ್ಪ ಟಿ, ಲಕ್ಷ್ಮೀ ತಳವಾರ, ಸಂಜನಾ , ಇಶರತ್ ಭಾನು, ಶ್ವೇತಾ ಕೆ, ಮನೋಹರಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಅಸಹಜ ಸಾವುಗಳಿಗೂ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ಗೂ ಲಿಂಕ್ ಇದೆಯಾ?
