ಬೆಂಗಳೂರು : ಇಂದಿರಾ ಕ್ಯಾಂಟೀನ್‍ಗಳಲ್ಲಿ ಇನ್ನು ಮುಂದೆ ಬಗೆ ಬಗೆಯ ತಿಂಡಿ ದೊರೆಯಲಿದೆ. ಇಂದಿರಾ ಕ್ಯಾಂಟೀನ್‍ಗಳಲ್ಲಿ ದರ್ಶಿನಿ ಹೋಟೆಲ್‍ಗಳ ಮಾದರಿಯ ಮೆನು ಸಿದ್ದವಾಗಿದ್ದು, ಶೀಘ್ರದಲ್ಲೇ ಬಗೆ ಬಗೆಯ ತಿಂಡಿ ತಿನಿಸುಗಳನ್ನು ಗ್ರಾಹಕರಿಗೆ ನೀಡಲಾಗುವುದು.
ಹೊಸ ಮೆನೂ ಪ್ರಕಾರ ಇನ್ನು ಮುಂದೆ ಇಂದಿರಾ ಕ್ಯಾಂಟಿನ್‍ಗಳಲ್ಲಿ ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು ಚಪಾತಿ ಪಲ್ಯದ ಜೊತೆಗೆ ಟೀ ಕಾಫಿ ವ್ಯವಸ್ಥೆಯೂ ಇರಲಿದೆ.
ಇಂದಿರಾ ಕ್ಯಾಂಟೀನ್‌ನ ಆಹಾರ ಪೂರೈಕೆಯಲ್ಲಿ ಈಗ ಭಾರಿ ಬದಲಾವಣೆ ಆಗಲಿದೆ. ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಆಹಾರ ಮೆನು ಬದಲಾವಣೆ ಮಾಡಲಾಗಿದ್ದು, ಇಂದಿರಾ ಕ್ಯಾಂಟೀನ್‌ನಲ್ಲಿ ದರ್ಶಿನಿ (ಹೋಟೆಲ್) ರೇಂಜ್‌ಗೆ ಮೆನು ಕೂಡ ಸಿದ್ಧವಾಗಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರಾದೇಶಿಕ ವಿಭಾಗವಾರು ಎಲ್ಲ ಜನರಿಗೂ ತಮ್ಮ ಆಹಾರಗಳು ಲಭ್ಯವಾಗುವಂತೆ ಮೆನು ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ:ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಜನಕೀಯ, ಅಮ್ಮಾ ಮಾದರಿಯಲ್ಲಿ ಬಲಗೊಳ್ಳಲಿ
ಇಂದಿರಾ ಕ್ಯಾಂಟೀನ್ ನ್ಯೂ ಮೆನು ಇಲ್ಲಿದೆ ನೋಡಿ:
• ಇಡ್ಲಿ ಚಟ್ನಿ/ ಸಾಂಬಾರ್
• ಬ್ರೆಡ್ & ಜಾಮ್
• ಮಂಗಳೂರು ಬನ್ಸ್
• ಬೇಕರಿ ಬನ್
• ಪಲಾವ್
• ಟೊಮ್ಯಾಟೊ ಬಾತ್
• ಖಾರಾ ಪೊಂಗಲ್
• ಬಿಸಿಬೇಳೆ ಬಾತ್
• ಅನ್ನ ಸಾಂಬಾರ್
• ರಾಗಿ ಮುದ್ದೆ ಸೊಪ್ಪುಸಾರು
• ಚಪಾತಿ & ಪಲ್ಯ
• ಟೀ ಕಾಫಿ
ಇಂದಿರಾ ಕ್ಯಾಂಟಿನ್ ಹೊಸ ಮೆನು
ಸೋಮವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
ಮಂಗಳವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ
ಬುಧವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು
ಗುರುವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
ಶುಕ್ರವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
ಶನಿವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
ಭಾನುವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು