ವೃತ್ತಿ ತೆರಿಗೆ ಸಂಗ್ರಹ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವೃತ್ತಿ ತೆರಿಗೆ ಸಂಗ್ರಹ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ ಸಂಬಂಧಪಟ್ಟ ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. IGST ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು.

ಇದನ್ನೂ ಓದಿ: ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದ ಸಿಎಂ ಸಿದ್ದರಾಮಯ್ಯ, ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚಿಸಿದರು.

ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. Action plan ಸಿದ್ದಪಡಿಸಬೇಕು.  ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ. ಶಿಖಾ ಉಪಸ್ಥಿತರಿದ್ದರು.

ಇದನ್ನೂ ನೋಡಿ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ 18 ಕ್ಷೇತ್ರಗಳಲ್ಲಿ 15ರಲ್ಲಿ ಎನ್‌ಡಿಎ ಗೆ ಸೋಲು

Donate Janashakthi Media

Leave a Reply

Your email address will not be published. Required fields are marked *