ಬೆಂಗಳೂರು: ರಾಜ್ಯ ಉಚ್ಛನ್ಯಾಯಾಲಯ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣರ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿದೆ. ಈ ಹಿಂದೆ ನೀಡಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಹೈಕೋರ್ಟ್ ಕೈಗೆತ್ತಿಗೊಂಡಿತ್ತು.
ಎಸ್‌ಐಟಿ ಪರ ವಕೀಲರು, ನ್ಯಾಯಾಲಯಕ್ಕೆ ‘ಭವಾನಿ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಎಲ್ಲವೂ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಯಾವುದೇ ಪ್ರಶ್ನೆಗೆ ಸರಿಯಾದ ಉತ್ತರ ನೀಡುತ್ತಿಲ್ಲ. ಇಡೀ ಪ್ರಕರಣದಲ್ಲಿ ಭವಾನಿ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದು ವೇಳೆ ತನಿಖೆಗೆ ಸಹಕರಿಸದಿದ್ದಲ್ಲಿ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ಆದ್ದರಿಂದ ಈಗಾಗಲೇ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕು’ ಎಂದು ವಾದಿಸಿದರು.
ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಸುದೀರ್ಘ ವಾದ ಮಂಡಿಸಿದರು. ‘ಅರ್ಜಿದಾರರು ಈಗಾಗಲೇ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಮತ್ತು ಪೊಲೀಸರಿಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವ ಅಗತ್ಯವಿಲ್ಲ’ ಎಂದು ಭವಾನಿ ಪರ ವಕೀಲರು ವಾದಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 7 ರಂದು ಕರ್ನಾಟಕ ಹೈಕೋರ್ಟ್ ಭವಾನಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ಆದೇಶದಂತೆ ಅರ್ಜಿದಾರರು ಮೂರು ದಿನಗಳ ಕಾಲ ವಿಚಾರಣೆಗೆ ಹಾಜರಾಗಿದ್ದಾರೆ ಎಂದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಪೀಠ, ಈ ಸಂದರ್ಭದಲ್ಲಿ, ಯಾವ ಕಾರಣಕ್ಕಾಗಿ ಭವಾನಿ ರೇವಣ್ಣ ಅವರನ್ನು ಬಂಧಿಸಬೇಕು ಎಂಬುದನ್ನು ವಿವರಿಸುವಂತೆ ಪೀಠವು ತನಿಖಾ ಪ್ರಾಧಿಕಾರವನ್ನು ಕೇಳಿತು. ಈ ರೀತಿಯಾಗಿ ಬಂಧಿಸಿ ವಿಚಾರಣೆ ನಡೆಸುವುದೇ ಆದರೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಬೇಕಾಗುತ್ತದೆ ಎಂದು ಹೇಳಿ, ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ಮುಂದೆ ಆದೇಶದವರೆಗೂ ವಿಸ್ತರಿಸಿತು.
ಇದನ್ನು ಓದಿ : ಪೋಕ್ಸೋ ಪ್ರಕರಣ : ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಇನ್ನು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಮಾಡಿದೆ. ಅಲ್ಲದೆ, ಭವಾನಿ ತನಿಖೆಗೆ ಅಸಹಕಾರ ತೋರುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಮಂಜೂರಾಗಿರುವ ಮಧ್ಯಂತರ ನಿರೀಕ್ಷ ಣಾ ಜಾಮೀನು ಮುಂದುವರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಶೇಷ ನ್ಯಾಯಪೀಠ ಕೆಲ ಕಾಲ ವಿಚಾರಣೆ ನಡೆಸಿದ ನಂತರ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಪ್ರೊ. ರವಿವರ್ಮ ಕುಮಾರ್, ನ್ಯಾಯಾಲಯ ಕಳೆದ ವಾರ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು. ನ್ಯಾಯಾಲಯದ ನಿರ್ದೇಶನದಂತೆ ಭವಾನಿ ರೇವಣ್ಣ ತನಿಖೆಗೆ ಸಹಕಾರ ನೀಡುತ್ತಿಲ್ಲ, ಅಸಹಕಾರ ತೋರುತ್ತಿರುವುದರಿಂದ ತನಿಖೆ ಮುಂದವರಿಸಲಾಗುತ್ತಿಲ್ಲ.ಅಲ್ಲದೆ, ಭವಾನಿ ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ, ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದೆ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಹಾಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೊಳಪಡಿಸಬೇಕಾಗಿದೆ. ಮೂರು ದಿನ ತನಿಖೆಗೆ ಹಾಜರಾದರೂ ಎಲ್ಲಾ ಪ್ರಶ್ನೆಗಳಿಗೂ ನೋ ಎಂಬ ಉತ್ತರ ನೀಡಿದ್ದಾರೆ, ಪೋನ್ ಕೋಡುತ್ತಿಲ್ಲ. ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ ಎಂದರು.
ಆ ನಂತರ ಪ್ರಾಸಿಕ್ಯೂಷನ್ ವಕೀಲರು, ಭವಾನಿ ರೇವಣ್ಣ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದಾರೆ. ಮಹಿಳೆಯ ಅಪಹರಣದ ಹಿಂದಿನ ಸೂತ್ರಧಾರಿ ಅವರೇ, ಎಲ್ಲಾಆರೋಪಿಗಳೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ, ಅದಕ್ಕೆ ಸಾಕ್ಷಿಗಳು ಇವೆ ಎಂದು ಹೇಳಿದರು. ಆಗ ನ್ಯಾಯಪೀಠ, ಪ್ರಾಸಿಕ್ಯೂಷನ್ ಕೇಳಿದ ಪ್ರಶ್ನೆಗೆ ಉತ್ತರ ಹೇಳುವುದು ಬಿಡುವುದು ಆರೋಪಿಗೆ ಬಿಟ್ಟ ವಿಚಾರ, ಜತೆಗೆ ನೀವು (ಪ್ರಾಸಿಕ್ಯೂಷನ್) ಹೀಗೆ ಉತ್ತರ ನೀಡಬೇಕೆಂದು ಬಯಸುವುದು ಸರಿಯಲ್ಲ. ಅನಗತ್ಯ ಪ್ರಶ್ನೆಗಳನ್ನು ಕೇಳಿದಾಗ ಅವರು ಉತ್ತರ ನೀಡದೇ ಇರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ ತನಿಖೆಯ ವೇಳೆ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳ ಪ್ರತಿಯನ್ನು ನೀಡುವಂತೆ ಸೂಚಿಸಿತು,
ಇದನ್ನು ನೋಡಿ : ಮೋದಿ 3.O ಸರ್ಕಾರ ತನ್ನ ಹಿಂದಿನ ಸರ್ವಾಧಿಕಾರಿ ನೀತಿ ಮುಂದುವರೆಸುತ್ತದೆಯೇ? Janashakthi Media