ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ನಡುವೆ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಗುರುವಾರ ಕ್ಯಾಬಿನೆಟ್ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿದರು. ಬೆಂಗಳೂರು
ವರದಿ ಸಲ್ಲಿಕೆ ಬಳಿಕ ಮಾತನಾಡಿ, ಎರಡು ತಿಂಗಳಿಗಿಂತ ಹೆಚ್ಚು ನಾನು ಹಾಗೂ ನನ್ನ ತಂಡ ಆಳವಾದ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ತರಾತುರಿ ಪ್ರಶ್ನೆ ಇಲ್ಲ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು ಕೇಳಲಿಲ್ಲ. ನಾವೇ ಸ್ವ ಇಚ್ಛೆಯಿಂದ ವರದಿಯನ್ನು ನೀಡಿದ್ದೇವೆ ಎಂದರು. ಬೆಂಗಳೂರು
‘ಬೇರೆ ವಿಚಾರ ಹೇಳುವಂತಿಲ್ಲ’
ವರದಿ ನೀಡಿರುವ ಹಂತದಲ್ಲಿ ಬೇರೆ ಯಾವ ವಿಚಾರವನ್ನು ಹೇಳಲು ಸಾಧ್ಯವಿಲ್ಲ. ಸರ್ಕಾರದ ತೀರ್ಮಾನ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಮಧ್ಯಂತರ ವರದಿ ನೀಡಿರುವುದು ಒಳ ಮೀಸಲಾತಿ ಜಾರಿಯ ವಿಳಂಬ ಧೋರಣೆಗೆ ಅನುಕೂಲ ಎಂಬ ವಾದವನ್ನು ನಿರಾಕರಣೆ ಮಾಡಿದ ಅವರು, ನನಗೆ ಹೀಗೆ ಅನ್ನಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ದಕ್ಷಿಣ ಕೊರಿಯಾದಲ್ಲಿ ಭೀಕರ ಕಾಡ್ಗಿಚ್ಚು: 24 ಮಂದಿ ಸಾವು, 27,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ
ಶಾಶ್ವತವಾದ ಪರಿಹಾರವನ್ನು ಕೊಡಬೇಕು ಎಂಬುದು ನನ್ನ ಆಸೆಯಾಗಿದೆ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ಅದರ ಆಧಾರದಲ್ಲಿ ಅಂತಿಮ ವರದಿ ಸಲ್ಲಿಸುತ್ತೇನೆ. ಮಧ್ಯಂತರ ವರದಿ ನೀಡಿದ್ದೇನೆ, ಇದಕ್ಕೆ ಸರ್ಕಾರ ಉತ್ತರ ಕೊಟ್ಟಿಲ್ಲ. ಉತ್ತರದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಮಧ್ಯಂತರ ವರದಿಯಲ್ಲಿ ನೇಮಕಾತಿ ಬಗ್ಗೆ ಯಾವುದೇ ಸಲಹೆ ಕೊಟ್ಟಿಲ್ಲ. ವರದಿಯಲ್ಲಿ ಏನಿದೆ ಎಂಬುದಕ್ಕೆ ನಾನು ಉತ್ತರ ನೀಡಲ್ಲ. ಇದನ್ನು ಸರ್ಕಾರದ ಬಳಿ ಕೇಳಬೇಕು ಎಂದು ಹೇಳಿದರು.
ಕ್ಯಾಬಿನೆಟ್ ನಲ್ಲಿ ಚರ್ಚೆ!
ಈಗಾಗಲೇ ನ್ಯಾ. ನಾಗಮೋಹನ್ ದಾಸ್ ಅವರು ತಮ್ಮ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದು, ಕ್ಯಾಬಿನೆಟ್ ನಲ್ಲಿ ಈ ವಿಚಾರ ಚರ್ಚೆ ಆಗುವ ಸಾಧ್ಯತೆ ಇದೆ. ಒಳಮೀಸಲಾತಿಗಾಗಿ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಏನು ತೀರ್ಮಾನ ಕೈಗೊಳ್ಳಲಾಗುವುದು ಎಂಬುದು ಮಹತ್ವ ಪಡೆದಿದೆ.
ಇದನ್ನೂ ನೋಡಿ: ತರಬೇತಿ! ತರಬೇತಿ! ಕಲಿಸಲಾಗದ ಅಸಹಾಯಕ ಸ್ಥಿತಿಯಲ್ಲಿ ಶಿಕ್ಷಕ! – ಸಿ.ಆರ್.ಬಾಬುಖಾನ್ ಮತ್ತು ಗುರುರಾಜ ದೇಸಾಯಿ ಮಾತುಕತೆ