ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ

ಬೆಂಗಳೂರು: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧ ಮುಂದೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ನಂತರ ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂವರೆಗೂ ಮಕ್ಕಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಡ್ರಗ್ಸ್ ಚಟದಿಂದಾಗಿ ಯುವಶಕ್ತಿಯು ತಪ್ಪು ದಾರಿ ಹಿಡಿಯುತ್ತಿದೆ. ಯುವಕರಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳೊಂದಿಗೆ ಹೆಜ್ಜೆ ಹಾಕುವುದು ನನಗೆ ತುಂಬಾ ಖುಷಿ ನೀಡಿದೆ ಎಂದು ನೆರೆದಿದ್ದ ಮಕ್ಕಳಿಗೆ, ಜನಸಮೂಹ, ಯುವಜನತೆಗೆ ಶಿವಕುಮಾರ್ ಸಂದೇಶ ನೀಡಿದರು.

ಆಚರಣೆ ಹಿನ್ನೆಲೆ : ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. (International Day against Drug abuse and illicit trafficking).

ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಸಲಾಗುತ್ತದೆ. ಪ್ರತಿ ವರ್ಷ ಪ್ರಪಂಚಾದ್ಯಂತ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕ ವಸ್ತುಗಳು ಉಂಟುಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ.

ಇದನ್ನೂ ಓದಿ:ಬ್ರ್ಯಾಂಡ್ ಬೆಂಗಳೂರು: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಸಲಹೆ ಪಡೆದ ಡಿ.ಕೆ. ಶಿವಕುಮಾರ್

1987 ಡಿಸೆಂಬರ್‌ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್‌ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಲಾಯಿತು. ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್‌ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ.

Donate Janashakthi Media

Leave a Reply

Your email address will not be published. Required fields are marked *