ಬೆಂಗಳೂರು : ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಯಾರು ಮಧ್ಯಪ್ರವೇಶ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಪರಿಮಿತಿಯಲ್ಲಿ ಯಾವ ಯಾವ ಕ್ರಮಗಳಾಗಬೇಕೋ ಆ ಕ್ರಮಗಳಾಗಲಿವೆ ಎಂದು ಈಗಾಗಲೇ ಮುಖ್ಯಮಂತ್ರಿ ಹೇಳಿರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಲೋಕಾಯುಕ್ತರ ದಾಳಿ ಪ್ರಕರಣಕ್ಕೆ ಸಂಬಂಸಿದಂತೆ ಸಮಗ್ರವಾದ ತನಿಖೆಯಾಗುತ್ತಿದ್ದು, ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹಾಗೂ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಾನು ಬೇರೆ ಏನು ಮಾತನಾಡುವುದಿಲ್ಲ ಎಂದರು.
ಇದನ್ನೂ ಓದಿ : ಶಾಸಕ ಮಾಡಾಳು ವಿರುದ್ಧವೂ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ ಒತ್ತಾಯ
ಲಂಚ ಪ್ರಕರಣ ಕುರಿತಂತೆ ನಿಷ್ಪಕ್ಷಪಾತ ತನಿಖೆಯಾಗಲಿದೆ. ಲೋಕಾಯುಕ್ತಕ್ಕೆ ಮರು ಚೈತನ್ಯ ನೀಡಿರುವುದೇ ಭ್ರಷ್ಟಾಚಾರ ತಡೆಯಲು ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿದ್ದರು.