ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಕಾನೂನಾತ್ಮಕವಾಗಿ ಶರಣಾಗಿದ್ದಾನೆ. ಎಸ್ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು.

ಇದು ಯಾವ ರೀತಿ ಪ್ರಚಲಿತಕ್ಕೆ ಬಂತು ಯಾರು ಪ್ರಚಾರ ಮಾಡಿದರು. ಪೆನ್ ಡ್ರೈವ್ ಯಾರ ಹತ್ತಿರ ಇತ್ತು ಅವರು ಯಾಕೇ ಅರೆಸ್ಟ್ ಆದರು ಅನ್ನುವುದರ ಕುರಿತು ಹಲವು ಆಯಾಮಗಳನ್ನು ಪಡೆದಿತ್ತು. ಖಂಡಿತವಾಗಿಯೂ ಇದರಲ್ಲಿ ರಾಜಕಾರಣವು ಬೆರತ್ತಿತ್ತು. ಕಾನೂನು ಪ್ರಕಾರ ಇಂತಹದ್ದನ್ನು ಪ್ರಚಾರ ಮಾಡುವುದು ಕಾನೂನು ವಿರುದ್ದವಾದದ್ದು. ಆ ನಿಟ್ಟಿನಲ್ಲಿ ಎಸ್ ಐಟಿ ಮುಂದುವರೆದು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿ : ಪ್ರಜ್ವಲ್‌ ರೇವಣ್ಣ ಗೆದ್ದರೂ ಕಾನೂನಿಡಿ ಶಿಕ್ಷೆಯಾಗಲೇಬೇಕು : ಬಡಗಲಪುರ ನಾಗೇಂದ್ರ ಕರೆ

ಇನ್ನು ವಾಲ್ಮೀಕಿ ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರ ಪ್ರಕರಣವು ಸಿಬಿಐಗೆ ಹೋಗುವುದು ಯೋಗ್ಯವಾಗಿದೆ ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ. ಬ್ಯಾಂಕ್ ನ ನಿಯಮ ಪ್ರಕಾರ 10 ಕೋಟಿಗಿಂತ ಜಾಸ್ತಿ ವಹಿವಾಟುಗಳ ಕುರಿತಾಗಿ ಸಿಬಿಐ ತನಿಖೆ ನಡೆಯಬೇಕು ಅನ್ನುವುದು ಇದೆ.

ಸಚಿವ ಬಿ.ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಇಡೀ ಸರ್ಕಾರದ ನೈತಿಕತೆ ಪ್ರಶ್ನೆ ಇದೆ. ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಯಾವ ನೈತಿಕತೆ ಬಗ್ಗೆ ಮಾತನಾಡಿದ್ರು
ಅದೇ ನಾಯಕರು ಇವತ್ತು ಸಿಎಂ, ಡಿಸಿಎಂ ಆಗಿದ್ದಾರೆ. ಹಾಗಾಗಿ ಅವರ ನೈತಿಕತೆ ಸರ್ಕಾರದ ನೈತಿಕತೆಯ ಪ್ರಶ್ನೆಯಿದೆ

ಪ್ರಮಾಣಿಕತೆ ಉಳಿಸಿಕೊಳ್ಳುತ್ತಾರೋ ಇಲ್ಲಾ ಮಂತ್ರಿಯನ್ನು ಉಳಿಸಿಕೊಳ್ಳುತ್ತಾರೋ ಅನ್ನುವ ಪ್ರಶ್ನೆ ಅವರ ಮೇಲೆ ಇದೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಶತ್ರು ಭೈರವಿ ಯಾಗ ಮಾಡುತ್ತಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ಯಾಗ ಯಜ್ಞ ಅವರಿಗೇ ಗೊತ್ತು ಎಂದು ಹೇಳಿದರು.

ಇದನ್ನು ನೋಡಿ : ಹಾಸನ ಚಲೋ | ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ – ಸಹಸ್ರಾರು ಜನರ ಹಕ್ಕೋತ್ತಾಯJanashakthi Media

Donate Janashakthi Media

Leave a Reply

Your email address will not be published. Required fields are marked *