ಧರ್ಮಸ್ಥಳ ಪ್ರಕರಣ: ತನಿಖೆ ಇನ್ನೂ ಪೂರ್ಣಗೊಂಡಿಲ್ಲ – ಎಸ್‍ಐಟಿ ಮುಖ್ಯಸ್ಥ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ, ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಅಲ್ಲ ಎಂದು ಡಿಸೆಂಬರ್‌ 5ರಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ.

ನಗರದ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರ್ಯಾರು?

ಇದನ್ನೂ ಓದಿ: ಬೆಂಗಳೂರು | ಸಚಿವ ಸಂಪುಟದಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರಕ್ಕೆ ಅಲೆಮಾರಿ ಸಮುದಾಯ ಎಚ್ಚರಿಕೆ

ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು ದೋಷಾರೋಪ ಪಟ್ಟಿ ಅಲ್ಲ, ತನಿಖೆಯ ವರದಿ ಅಷ್ಟೇ ಎಂದರು.

ಈ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಮಾತ್ರ ಗುರಿಯಾಗಿಸಿ ಬಂಧಿಸಲಾಯಿತು, ಇದಕ್ಕೆ ಸಂಬಂಧಿಸಿದ ಉಳಿದವರನ್ನೇಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಣಬ್ ಮೊಹಾಂತಿ, ಎಲ್ಲರನ್ನು ಬಂಧನ ಮಾಡುವುದೇ ತನಿಖೆಯಲ್ಲ. ಸದ್ಯ ಪ್ರಕರಣದ ತನಿಖೆ ಉತ್ತಮ ಹಂತದಲ್ಲಿದೆ ಎಂದರು.

ಇದನ್ನೂ ನೋಡಿ: ಬೆಂಗಳೂರು | ಟನಲ್‌ ಟ್ರಬಲ್‌ !!? ಕಾತ್ಯಾಯಿನಿ ಚಾಮರಾಜ್ ಜೊತೆ ಕೆ.ಎಸ್. ವಿಮಲಾ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *