ಬಿಜೆಪಿ ಅವಧಿಯ ಕೋವಿಡ್‌ ಹಗರಣ ತನಿಖೆ ನಿಶ್ಚಿತ: ಸಚಿವ ದಿನೇಶ್‌ ಗುಂಡುರಾವ್‌

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ.ಕೆ.ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೋವಿಡ್ ಹಗರಣಗಳ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ, ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದರ ಬಗ್ಗೆ ಚಿಂತನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್ ಹಾಗೂ ಲಾಕ್‌ಡೌನ್‌ಗಳ ದುಸ್ಥಿತಿಗೆ ಪರಿಹಾರಗಳ ಸಮರ್ಪಕ ಪ್ಯಾಕೇಜ್‌ಗಾಗಿ ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳ ಮನವಿ

ಕೊರೋನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದ್ದು ತನಿಖೆ ನಡೆಸುವುದು ನಿಶ್ಚಿತ ಎಂದಿದ್ದಾರೆ.

ಬೆಂಗಳೂರು ಸಿಟಿ ರೌಂಡ್ಸ್ ಹಾಕುತ್ತಿದ್ದು ಜೊತೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ನಾನು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಆಸ್ಪತ್ರೆಗಳಲ್ಲಿನ ವೈದ್ಯರ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತರ ಮೂಲಕ ದೂರು ಬಂದಿರುವ ಕಾರಣ ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಆದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇನ್ನು ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

Donate Janashakthi Media

Leave a Reply

Your email address will not be published. Required fields are marked *