ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿವೆ
ಕೊರೊನಾ ನಡುವೆಯೂ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದ ಐಪಿಎಲ್ ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಐಪಿಎಲ್ ಶುರುವಾಗಲಿದ್ದು, ಐಪಿಎಲ್‌ನ 14ನೇ ಆವೃತ್ತಿಯ ಮೊದಲ ಪಂದ್ಯ ಇಂದು ಸಂಜೆ ಚೆನ್ನೈನ ಎಂ.ಎ ಚಿದಂಬರಮ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಬಾರಿ ಕೊರೋನಾ ಕಾರಣದಿಂದ ಖಾಲಿ ಮೈದಾನದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. 6 ನಗರಗಳಲ್ಲಿ 8 ತಂಡಗಳ ನಡುವೆ ಚುಟುಕು ಕ್ರಿಕೆಟ್ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿರೋದು ವಿಶೇಷವಾಗಿದೆ. ಮೊದಲ ಪಂದ್ಯದಲ್ಲಿ ಜಯಭೇರಿಯೊಂದಿಗೆ 14ನೇ ಆವೃತ್ತಿಯನ್ನು ಭರ್ಜರಿಯಾಗಿ ಪ್ರಾರಂಭಿಸಲು ಉಭಯ ತಂಡಗಳು ಸನ್ನದ್ಧವಾಗಿವೆ.
ಎಲ್ಲಾ ತಂಡಗಳು ಕೂಡ ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಅಂತಿಮ ಹಂತದ ಕಸರತ್ತನ್ನು ನಡೆಸುತ್ತಿದೆ. ಕೊರೊನಾ ವೈರಸ್‌ನ ಕಾರಣದಿಂದಾಗಿ ಆತಂಕದಲ್ಲಿಯೇ ಈ ಬಾರಿಯ ಟೂರ್ನಿಯೂ ನಡೆಯುತ್ತಿದ್ದು ಚಾಂಪಿಯನ್ ಪಟ್ಟಕ್ಕೇರಲು ಎಲ್ಲಾ ತಂಡಗಳು ಪರಿಶ್ರಮ ಪಡುತ್ತಿದೆ.
ಕಳೆದ ಬಾರಿಯ ಆವೃತ್ತಿಯನ್ನು ದುಬೈನಲ್ಲಿ ನಡೆಸಿದ ನಂತರ ಈಗ ಭಾರತದಲ್ಲಿಯೇ ಐಪಿಎಲ್ ಪಂದ್ಯಗಳು ನಡೆಯುತ್ತಿದೆ. ಆದರೆ ಈ ಬಾರಿಯ ಟೂರ್ನಿಯನ್ನು ಆರು ಕ್ರೀಡಾಂಗಣಗಳಲ್ಲಿ ಆಯೋಜನೆ ಮಾಡುತ್ತಿದ್ದು ಎಲ್ಲಾ ತಂಡಗಳು ತವರು ಅಂಗಳದ ಲಾಭವನ್ನು ಕಳೆದುಕೊಂಡಿದೆ. ಇದು ಪಂದ್ಯದ ಸ್ಪರ್ಧಾತ್ಮಕತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂಬುದು ತಜ್ಞರ ಅಭಿಮತ.
ಹಾಗಾದರೆ ಈ ಬಾರಿಯ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲಾ ತಂಡಗಳ ಸ್ವಾಡ್ ಹೇಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್ ದೇಶಪಾಂಡೆ, ಫಿನ್ ಅಲೆನ್, ಶಹಬಾಜ್ ಅಹಮದ್, ನವದೀಪ್ ಸೈನಿ, ಆಡಮ್ ಜಂಪಾ, ಕೈಲ್ ಜೇಮಿಸನ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಸಚಿನ್ ಬೇಬಿ, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ಕೆ.ಎಸ್.ಭರತ್, ಸುಯಾಶ್ ಪ್ರಭುದೇಸಾಯಿ, ಡೇನಿಯಲ್ ಸ್ಯಾಮ್ಸ್, ಹರ್ಷಲ್ ಪಟೇಲ್.
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ರಿಸ್ ಲಿನ್, ಅನ್ಮೋಲ್ಪ್ರೀತ್ ಸಿಂಗ್, ಸೌರಭ್ ತಿವಾರಿ, ಆದಿತ್ಯ ತಾರೆ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಅನುಕುಲ್ ರಾಯ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ರಾಹುಲ್ ಚಹರ್, ಜಯಂತ್ ಯಾದವ್, ಧವಲ್ ಕುಲಕರ್ಣಿ, ಮೊಹ್ಸಿನ್ ಖಾನ್, ನಾಥನ್ ಕೌಲ್ಟರ್ ನೈಲ್, ಆಡಮ್ ಮಿಲ್ನೆ, ಪಿಯೂಷ್ ಚಾವ್ಲಾ, ಜೇಮ್ಸ್ ನೀಶಮ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಅರ್ಜುನ್ ತೆಂಡೂಲ್ಕರ್
ಡೆಲ್ಲಿ ಕ್ಯಾಪಿಟಲ್ಸ್ : ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ರಿಷಭ್ ಪಂತ್(ನಾಯಕ/ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೋಯಿನಿಸ್, ಕ್ರಿಸ್ ವೋಕ್ಸ್, ಆರ್ ಅಶ್ವಿನ್, ಆಕ್ಸಾರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್, ಪ್ರವೀಣ್ ದುಬೆ, ಕಗಿಸೊ ರಬಡಾ, ಅನ್ರಿಕ್ ನಾರ್ತ್ಜೆ, ಇಶಾಂತ್ ಶರ್ವಾ , ಉಮೇಶ್ ಯಾದವ್, ರಿಪಾಲ್ ಪಟೇಲ್, ವಿಷ್ಣು ವಿನೋದ್, ಲುಕ್ಮನ್ ಮೆರಿವಾಲಾ, ಎಂ ಸಿದ್ದಾರ್ಥ್, ಟಾಮ್ ಕುರ್ರನ್, ಸ್ಯಾಮ್ ಬಿಲ್ಲಿಂಗ್ಸ್.
ಸನ್‌ರೈಸರ್ಸ್ ಹೈದರಾಬಾದ್ : ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಶ್ರೀವತ್ಸ ಗೋಸ್ವಾಮಿ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇದಾರ್ ಜಾಧವ್, ಪ್ರಿಯಮ್ ಗಾರ್ಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ವಿರಾಟ್ ಸಿಂಗ್, ಮಿಚೆಲ್ ಮಾರ್ಷ್, ಜೇಸನ್ ಹೋಲ್ಡರ್, ಮೊಹಮ್ಮದ್ ನಬಿ, ರಶೀದ್ ಖಾನ್, ಶಹಬಾಸ್ ನದೀಮ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಸಿದ್ದಾರ್ಥ್ ಕೌಲ್, ಬೆಸಿಲ್ ಥಾಂಪಿ, ಜಗದೀಷ ಸುಚಿತ್, ಮುಜೀಬ್-ಉರ್-ರಹಮಾನ್
ಪಂಜಾಬ್ ಕಿಂಗ್ಸ್ : ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಮಂದೀಪ್ ಸಿಂಗ್, ಪ್ರಬ್ಸಿಮ್ರಾನ್ ಸಿಂಗ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಹರ್ಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್, ಇಶಾನ್ ಪೊರೆಲ್, ದರ್ಶನ್ ನಲ್ಕಂಡೆ, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್
ಕೊಲ್ಕತ್ತಾ ನೈಟ್ ರೈಡರ್ಸ್ : ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಕರುಣ್ ನಾಯರ್, ಇಯಾನ್ ಮೋರ್ಗಾನ್ (ನಾಯಕ), ನಿತೀಶ್ ರಾಣಾ, ಗುರ್ಕೀರತ್ ಮನ್ ಸಿಂಗ್, ಟಿಮ್ ಸೀಫರ್ಟ್, ದಿನೇಶ್ ಕಾರ್ತಿಕ್, ಶೆಲ್ಡನ್ ಜಾಕ್ಸನ್, ಆಂಡ್ರೆ ರಸ್ಸೆಲ್, ಶಕೀಬ್ ಅಲ್ ಹಸನ್, ಬೆನ್ ಕಟಿಂಗ್, ವೆಂಕಟೇಶ್ ಅಯ್ಯರ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಹರ್ಭಜನ್ ಸಿಂಗ್, ಪವನ್ ನೇಗಿ, ವೈಭವ್ ಅರೋರಾ, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗುಸನ್, ಪ್ರಸಾದ್ ಕೃಷ್ಣ, ಸಂದೀಪ್ ವಾರಿಯರ್, ಶಿವಂ ಮಾವಿ, ಕಮಲೇಶ್ ನಾಗರ್ಕೋಟಿ
ಚೆನ್ನೈ ಸೂಪರ್ ಕಿಂಗ್ಸ್ : ಎಂ.ಎಸ್.ಧೋನಿ (ನಾಯಕ/ವಿಕೆಟ್ ಕೀಪರ್), ಸುರೇಶ್ ರೈನಾ, ನಾರಾಯಣ್ ಜಗದೀಶನ್, ಋತುರಾಜ್ ಗಾಯಕ್ವಾಡ್, ಕೆ.ಎಂ.ಆಸಿಫ್, ಕರ್ಣ್ ಶರ್ಮಾ, ಅಂಬಾಟಿ ರಾಯುಡು, ದೀಪಕ್ ಚಾಹರ್, ಫಾಫ್ ಡು ಪ್ಲೆಸಿಸ್, ಶಾರ್ದುಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್, ಡ್ವೇನ್ ಬ್ರಾವೋ, ಲುಂಗಿ ಎನ್‌ಜಿಡಿ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಇಮ್ರಾನ್ ತಾಹಿರ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಕೆ ಗೌತಮ್, ಚೇತೇಶ್ವರ ಪೂಜಾರ, ಎಂ.ಹರಿಶಂಕರ್ ರೆಡ್ಡಿ, ಕೆ.ಭಗತ್ ವರ್ಮಾ, ಸಿ ಹರಿ ನಿಶಾಂತ್, ಆರ್ ಸಾಯಿ ಕಿಶೋರ್
ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್ (ನಾಯಕ), ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರವಾತ್, ಡೇವಿಡ್ ಮಿಲ್ಲರ್ , ಕ್ರಿಸ್ಟೋಫರ್ ಮೋರಿಸ್, ಶಿವಮ್ ಡ್ಯೂಬ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್, ಲಿಯಾಮ್ ಲಿವಿಂಗ್ಸ್ಟೋನ್, ಕೆ.ಸಿ. ಕರಿಯಪ್ಪ, ಆಕಾಶ್ ಸಿಂಗ್, ಕುಲದೀಪ್ ಯಾದವ್.
ಐಪಿಎಲ್ ವೇಳಾಪಟ್ಟಿ ನೋಡಲು ಈ ಲಿಂಕ್ ಕ್ಲಿಕ್ ಮಾಡಿ