ಕಡೆಗೂ ರದ್ದಾದ ಐಪಿಎಲ್‌ ಮುಂದಿನ ಪಂದ್ಯಗಳು

ನವದೆಹಲಿ: ವ್ಯಾಪಕವಾಗ ಹರಡುತ್ತಿರುವ ಕೋವಿಡ್‌ ಸೋಂಕಿನಿಂದ ಕ್ರಿಕೆಟ್‌ ಸಹ ಹೊರತಾಗಿಲ್ಲ. ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಪಾಸಿಟಿವ್‌ ವರದಿಗಳು ದೃಢಪಡುತ್ತಿರುವುದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ರದ್ದುಪಡಿಸಿದೆ.

ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಮಾಹಿತಿ ನೀಡಿದ್ದಾರೆ.

ಭಾರತೀಯ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿ (ಐಪಿಎಲ್ ಜಿಸಿ) ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತುರ್ತು ಸಭೆಯಲ್ಲಿ ಐಪಿಎಲ್ 2021 ಪಂದ್ಯಾವಳಿಯನ್ನು ಮುಂದೂಡುವ ಕುರಿತು ತಕ್ಷಣದಿಂದಲೇ ಜಾರಿಗೊಳಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಿದೆ.

ಕೋಲ್ಕತ್ತ ನೈಟ್‌ ರೈಡರ್ಸ್ ತಂಡದ ಆಟಗಾರ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದರಿಂದ ನೆನ್ನೆ ನಡೆಯಬೇಕಿದ್ದ ಆರ್‌ಸಿಬಿ–ಕೆಕೆಆರ್ ನಡುವಣ ಪಂದ್ಯ ಮುಂದೂಡಲಾಗಿತ್ತು.

ನಂತರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಕೋಚ್ ಎಲ್.ಬಾಲಾಜಿ ಅವರಿಗೂ  ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾಳಿನ ರಾಜಸ್ಥಾನ್ ರಾಯಲ್ಸ್ ಮತ್ತು ಸಿಎಸ್‌ಕೆ ನಡುವಿನ ತಂಡಗಳ ಪಂದ್ಯಾವಳಿಯನ್ನು ಮುಂದೂಡಲಾಗಿದೆ ಎಂದು ಇಂದು ಬೆಳಿಗ್ಗೆ ಬಿಸಿಸಿಐ ಸ್ಪಷ್ಟಪಡಿಸಿತು.

ಇಂದು ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ವೃದ್ಧಿಮಾನ್ ಸಹಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ದೇಶದಾದ್ಯಂತ ಕೋವಿಡ್ ಪ್ರಕರಣ ಏರಿಕೆಯಾಗುತ್ತಲೇ ಇದೆ. ಐಪಿಎಲ್‌ನ ಟೂರ್ನಿಯ ಎಲ್ಲಾ ಪಂದ್ಯಗಳನ್ನೂ ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ಚಿಂತನೆ ನಡೆಸಿದೆ.

Donate Janashakthi Media

Leave a Reply

Your email address will not be published. Required fields are marked *