ಪಿಎಸ್‌ಐ ಅಕ್ರಮ: ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​​​ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(ಪಿಎಸ್​ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಐಪಿಎಸ್‌ ಅಧಿಕಾರಿ ಅಮೃತ್​ ಪೌಲ್​ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ  ಆದೇಶಿಸಿದೆ. ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪೌಲ್ ಅವರನ್ನು ಜುಲೈ 4ರಂದು ಬಂಧಿಸಿದ್ದರು.

ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಇಂದು(ಜುಲೈ 15) ​ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಅಮೃತ್​ ಪೌಲ್​ ವೈದ್ಯಕೀಯ ಚಿಕಿತ್ಸೆಯಲ್ಲಿರುವುದರಿಂದ  ಸುಳ್ಳುಪತ್ತೆ ಪರೀಕ್ಷೆ ಸದ್ಯಕ್ಕೆ ಬೇಡ ಎಂದು ನ್ಯಾಯಾಲಯ ತಿಳಿಸಿದೆ.

ವಕೀಲ ಪ್ರಸನ್ನ ಕುಮಾರ್ ಸಿಐಡಿ ಪರ ವಾದ ಮಂಡಿಸಲಿದ್ದಾರೆ. ಸಿಐಡಿ ಅಧಿಕಾರಿಗಳು ಈಗಾಗಲೇ ಅಮೃತ್‌ ಪೌಲ್‌ ಅವರ ರೂ.10 ಲಕ್ಷ ಒಳಗೊಂಡಿದ್ದ 4 ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿಕೊಂಡಿದ್ದಾರೆ.

ಇದೇ ವೇಳೆ ನ್ಯಾಯಾಲಯಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸಿಐಡಿ ವಕೀಲರು ಸಲ್ಲಿಸಿದರು. ಒಎಂಆರ್‌ ಪುಟಗಳು ಬದಲಾಗಿರುವ ಕುರಿತೂ ಮಾಹಿತಿ ಸಲ್ಲಿಸಲಾಗಿದೆ. ಸಿಐಡಿ ತನಿಖಾಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *